ವಿಂಗಡಿಸದಸಂಸ್ಕೃತಿ, ಪರಂಪರೆ

75ನೇ ಗಣರಾಜ್ಯೋತ್ಸವ ಸಂಭ್ರಮ; ಕಣ್ಮನ ಸೆಳೆದ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳು

ದೇಶ ಇಂದು 75ನೇ ಗಣರಾಜ್ಯೋತ್ಸವನ್ನು( 75th Republic Day) ಆಚರಿಸುತ್ತಿದ್ದು, ದೆಹಲಿಯ ಕರ್ತವ್ಯ ಪಥದಲ್ಲಿ (Kartavya Path) ಗಣರಾಜ್ಯೋತ್ಸವದ ಆಚರಣೆ ಅದ್ದೂರಿಯಾಗಿ ನಡೆಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧ್ವಜಾರೋಹಣ ನೆರವೇರಿಸಿದರು.

ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯಲ್ ಮ್ಯಾಕ್ರಾನ್ ಸೇರಿದಂತೆ ಗಣ್ಯಾತಿಗಣ್ಯರು ಸಮ್ಮುಖದಲ್ಲಿ ಸೇನಾ ಶಕ್ತಿ, ನಾರಿ ಶಕ್ತಿ ಹಾಗೂ ನಮ್ಮ ದೇಶದ ಶ್ರೀಮಂತ ಸಂಸ್ಕೃತಿಯ ಅನಾವರಣವಾಯಿತು.

ಈ ವರ್ಷದ ಗಣರಾಜ್ಯೋತ್ಸವ ಪರೇಡ್ ಥೀಮ್ (India Republic Day Parade 2024 Theme) “ವಿಕಸಿತ ಭಾರತ” ಮತ್ತು “ಭಾರತ್ – ಲೋಕತಂತ್ರ ಕಿ ಮಾತೃಕಾ” ಆಗಿದೆ.

ಈ ಬಾರಿಯ ಟ್ಯಾಬ್ಲೋ ಪ್ರದರ್ಶನದಲ್ಲಿ (tableaux) ದೇಶದ ವಿವಿಧ ರಾಜ್ಯಗಳ 16 ಟ್ಯಾಬ್ಲೋ ಸೇರಿದಂತೆ ಕೇಂದ್ರ ಸಚಿವಾಲಯಗಳ 10 ಸೇರಿ ಒಟ್ಟು 26 ಸ್ತಬ್ಧಚಿತ್ರಗಳು ಗಮನ ಸೆಳೆದವು.

ಅರುಣಾಚಲ ಪ್ರದೇಶ, ಹರಿಯಾಣ, ಮಣಿಪುರ, ಮಧ್ಯಪ್ರದೇಶ, ಒಡಿಶಾ, ಛತ್ತೀಸ್‌ಗಢ, ರಾಜಸ್ಥಾನ, ಮಹಾರಾಷ್ಟ್ರ, ಆಂಧ್ರಪ್ರದೇಶ, ಲಡಾಖ್‌, ತಮಿಳುನಾಡು, ಗುಜರಾತ್, ಮೇಘಾಲಯ, ಜಾರ್ಖಂಡ್, ಉತ್ತರಪ್ರದೇಶ, ಹಾಗೂ ತೆಲಂಗಾಣ ರಾಜ್ಯಗಳ ಸ್ತಬ್ಧಚಿತ್ರಗಳು ಪ್ರದರ್ಶನಗೊಂಡವು.

ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರ, ನಾರಿಶಕ್ತಿ, ದೇಶದ ಸೇನಾ ಬಲ, ಭಾರತೀಯ ಸಂಶೋಧನಾ ಸಂಸ್ಥೆಯ (ISRO), ಕೇಂದ್ರ ಚುನಾವಣಾ ಆಯೋಗ ಕುರಿತಾದ ಸ್ತಬ್ಧಚಿತ್ರಗಳು ಪ್ರಮುಖ ಆಕರ್ಷಣೆಯಾಗಿತ್ತು.

‘ಮಹಿಳಾ ಸಬಲೀಕರಣ’ದ (Women Empowerment) ವಿಷಯ ಆಧರಿಸಿ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರ ಪ್ರಗತಿ ಮತ್ತು ಸಾಧನೆಗಳನ್ನು ಬಿಂಬಿಸುವ ಸ್ತಬ್ಧಚಿತ್ರವನ್ನು ಹರಿಯಾಣ, ಮಣಿಪುರ, ಮಹಾರಾಷ್ಟ್ರ ಸೇರಿದಂತೆ ಕೆಲವು ರಾಜ್ಯಗಳು ಪ್ರದರ್ಶಿಸದವು.

ಕಳೆದ 14 ವರ್ಷಗಳಿಂದ ಸತತವಾಗಿ ಪರೇಡ್ ನಲ್ಲಿ ಭಾಗವಹಿಸುತ್ತಿದ್ದ ಕರ್ನಾಟಕದ ಸ್ತಬ್ಧಚಿತ್ರವು (Karnataka Tableaux) ಈ ವರ್ಷ ನಿರಾಕರಣೆಯನ್ನು ಅನುಭವಿಸಬೇಕಾಯಿತು. ಇತರ ರಾಜ್ಯಗಳಿಗೆ ಅವಕಾಶ ಕಲ್ಪಿಸುವ ನಿಟ್ಟಿನಿಂದ ಕೇಂದ್ರ ಸರ್ಕಾರವು ಕರ್ನಾಟಕದ ಸ್ತಬ್ಧಚಿತ್ರವನ್ನು ನಿರಾಕರಿಸಿತು ಎನ್ನಲಾಗಿದೆ.

ನಾವೂ ಇನ್ ಸ್ಟಾಗ್ರಾಮ್ ನಲ್ಲೂ ಇದ್ದೀವಿ! ನಮ್ಮ ಗ್ರೂಪ್ ಜಾಯಿನ್ ಆಗಿ.

ನೀವು ಪ್ರವಾಸ ಹೋಗುವ ತಾಣದ ಮಾಹಿತಿ, ಕನ್ನಡ.ಟ್ರಾವೆಲ್ (Kannada.Travel) ಜಾಲತಾಣದಲ್ಲಿ ಪ್ರಕಟವಾಗುವ ಬರಹಗಳ ವಿವರ, ಅಪರೂಪದ ಟ್ರಾವೆಲರ್ ಗಳ ಪರಿಚಯ, ಪ್ರವಾಸಿ ತಾಣಗಳ ಕುತೂಹಲಕರ ಚಿತ್ರ ಬರಹ ಎಲ್ಲವೂ ಇಲ್ಲಿ ನಿಮಗೆ ಸಿಗುತ್ತದೆ. ಬನ್ನಿ ಜೊತೆಯಾಗಿ.

Related Articles

Leave a Reply

Your email address will not be published. Required fields are marked *

Back to top button