ನೇಪಾಳದಿಂದ ರಾಮ ಮಂದಿರಕ್ಕೆ ವಿಶೇಷ ಉಡುಗೊರೆ
ಮುಂದಿನ ತಿಂಗಳು ಅಯೋಧ್ಯೆಯಲ್ಲಿ (Ayodhya)ನಡೆಯಲಿರುವ ರಾಮಮಂದಿರ(Ram Mandir)ಉದ್ಘಾಟನಾ ಸಮಾರಂಭಕ್ಕೆ ಶ್ರೀರಾಮನ ಧರ್ಮಪತ್ನಿ ಸೀತಾಮಾತೆಯ (sita mata)ತವರು ನೇಪಾಳದಿಂದ (Nepal )ವಿಶೇಷ ಉಡುಗೊರೆಗಳು ಆಗಮಿಸುತ್ತಿವೆ.
ನೇಪಾಳದಿಂದ ಅಯೋಧ್ಯೆಗೆ ವಿವಿಧ ರೀತಿಯ ಆಭರಣಗಳು, ಪಾತ್ರೆಗಳು, ಬಟ್ಟೆಗಳು ಮತ್ತು ಸಿಹಿತಿಂಡಿಗಳನ್ನು ಒಳಗೊಂಡ ವಿಶೇಷ ಸ್ಮಾರಕಗಳನ್ನು ಕಳುಹಿಸಲಿದೆ ಎಂದು ಹೇಳಲಾಗಿದೆ. ಈ ಬಗ್ಗೆ ರಾಷ್ಟ್ಪೀಯ ಮಾಧ್ಯಮಗಳು ವರದಿ ಮಾಡಿದ್ದು, ಸ್ಮರಣಿಕೆಗಳನ್ನು ವಿತರಿಸಲು ಜನಕಪುರಧಾಮ-ಅಯೋಧ್ಯಧಾಮ ಪ್ರಯಾಣವನ್ನು ಕೈಗೊಳ್ಳಲಾಗುವುದು ಪತ್ರಿಕೆಯೊಂದು ವರದಿ ಮಾಡಿದೆ.
ಜನಕ್‌ಪುರಧಾಮ್‌ನಿಂದ ಜಲೇಶ್ವರ ನಾಥ್, ಮಲಂಗ್ವಾ, ಸಿಮ್ರೌಂಗಧ್, ಗಧಿಮಾಯಿ, ಬಿರ್‌ಗುಂಜ್ ಮೂಲಕ ಬೇಟಿಯಾ, ಕುಶಿನಗರ, ಸಿದ್ಧಾರ್ಥನಗರ, ಗೋರಖ್‌ಪುರ ಮಾರ್ಗವಾಗಿ ಉತ್ತರ ಪ್ರದೇಶದ ಅಯೋಧ್ಯೆ ತಲುಪಲಿದೆ.
ನೀವು ಇದನ್ನು ಇಷ್ಟ ಪಡಬಹುದು:ರಾಮ ಮಂದಿರ ಉದ್ಘಾಟನೆಗೆ ಹೋಗುವವರಿಗೆ ಸಿಹಿ ಸುದ್ದಿ
ಇದಕ್ಕೂ ಮುನ್ನ ನೇಪಾಳದ ಕಾಳಿಗಂಡಕಿ ನದಿ ದಡದಿಂದ ಸಂಗ್ರಹಿಸಿದ ಶಾಲಿಗ್ರಾಮ ಕಲ್ಲುಗಳನ್ನು ಶ್ರೀರಾಮನ ಪ್ರತಿಮೆ ಮಾಡಲು ಅಯೋಧ್ಯೆಗೆ ಕಳುಹಿಸಲಾಗಿದ್ದು, ಉದ್ಘಾಟನಾ ದಿನದಂದು ಅದನ್ನು ದೇವಾಲಯದಲ್ಲಿ ಸ್ಥಾಪಿಸಲಾಗುವುದು ಎಂದು ಪತ್ರಿಕೆ ತಿಳಿಸಿದೆ.
ನಾವೂ ಇನ್ ಸ್ಟಾಗ್ರಾಮ್ ನಲ್ಲೂ ಇದ್ದೀವಿ! ನಮ್ಮ ಗ್ರೂಪ್ ಜಾಯಿನ್ ಆಗಿ.
ನೀವು ಪ್ರವಾಸ ಹೋಗುವ ತಾಣದ ಮಾಹಿತಿ, ಕನ್ನಡ.ಟ್ರಾವೆಲ್ (Kannada.Travel) ಜಾಲತಾಣದಲ್ಲಿ ಪ್ರಕಟವಾಗುವ ಬರಹಗಳ ವಿವರ, ಅಪರೂಪದ ಟ್ರಾವೆಲರ್ ಗಳ ಪರಿಚಯ, ಪ್ರವಾಸಿ ತಾಣಗಳ ಕುತೂಹಲಕರ ಚಿತ್ರ ಬರಹ ಎಲ್ಲವೂ ಇಲ್ಲಿ ನಿಮಗೆ ಸಿಗುತ್ತದೆ. ಬನ್ನಿ ಜೊತೆಯಾಗಿ.