ದೂರ ತೀರ ಯಾನಮ್ಯಾಜಿಕ್ ತಾಣಗಳುವಿಂಗಡಿಸದ

ಬೆಂಗಳೂರು ಮತ್ತು ದೆಹಲಿ ವಿಮಾನ ನಿಲ್ದಾಣಗಳಿಗೆ ‘ವರ್ಷದ ಅತ್ಯುತ್ತಮ ವಿಮಾನ ನಿಲ್ದಾಣ’ ಪ್ರಶಸ್ತಿ

ವಿಂಗ್ಸ್ ಇಂಡಿಯಾದಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ವರ್ಷದ ಅತ್ಯುತ್ತಮ ವಿಮಾನ ನಿಲ್ದಾಣ’ ಪ್ರಶಸ್ತಿ.

“ವಿಂಗ್ಸ್ ಇಂಡಿಯಾ 2024” (Wings India Awards 2024) ಭಾರತ ಮತ್ತು ಏಷ್ಯಾದಲ್ಲಿ ನಡೆಯುವ ವಾಯುಯಾನ ಕ್ಷೇತ್ರದ ಅತಿದೊಡ್ಡ ಸಭೆಗಳಲ್ಲಿ ಒಂದಾಗಿದೆ. ನಾಲ್ಕು ದಿನಗಳ ಕಾಲ ನಡೆದ ವಾಯುಯಾನ ಶೃಂಗಸಭೆಯು ಜನವರಿ 21 ರಂದು ಮುಕ್ತಾಯಗೊಂಡಿತು.

ಈ ಸಭೆಯಲ್ಲಿ ಕೆಲವು ಅತ್ಯುತ್ತಮ ವಿಮಾನ ನಿಲ್ದಾಣಗಳು, ವಿಮಾನಯಾನ ಸಂಸ್ಥೆಗಳು ಮತ್ತು ವಿಮಾನಯಾನ ವಲಯದ ಉದ್ಯಮಗಳಿಗೆ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.

ಅವುಗಳಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ದೆಹಲಿ ವಿಮಾನ ನಿಲ್ದಾಣಗಳು ಜಂಟಿಯಾಗಿ ನಾಗರಿಕ ವಿಮಾನಯಾನ ವಲಯದಲ್ಲಿ ‘ವರ್ಷದ ಅತ್ಯುತ್ತಮ ವಿಮಾನ ನಿಲ್ದಾಣ’ ( Best Airport of the Year) ಪ್ರಶಸ್ತಿಯನ್ನು ಪಡೆದುಕೊಂಡಿದೆ.

ವಿಮಾನ ನಿಲ್ದಾಣದ ಕಾರ್ಯ ಚಟುವಟಿಕೆಗಳ ಉತ್ಕೃಷ್ಟತೆ ಮತ್ತು ಪ್ರಯಾಣಿಕರಿಗೆ ಸುಲಭ ಮತ್ತು ತೊಂದರೆ ರಹಿತ ಸೌಲಭ್ಯಗಳನ್ನು ಒದಗಿಸುತ್ತಿರುವ ಆಧಾರದ ಮೇಲೆ ಈ ವಿಮಾನ ನಿಲ್ದಾಣಗಳು ಈ ಪ್ರಶಸ್ತಿಯನ್ನು ಗೆದ್ದುಕೊಂಡಿವೆ.

ಬೆಂಗಳೂರು ವಿಮಾನ ನಿಲ್ದಾಣವು ಸಾಮಾಜಿಕ ಮಾಧ್ಯಮದಲ್ಲಿ ಈ ಸುದ್ದಿಯನ್ನು ಪ್ರಕಟಿಸಿದ್ದು, “ “ವಿಂಗ್ಸ್ ಇಂಡಿಯಾ ಅವಾರ್ಡ್ಸ್ 2024 ರಲ್ಲಿ BLR ವಿಮಾನ ನಿಲ್ದಾಣವು ‘ವರ್ಷದ ಅತ್ಯುತ್ತಮ ವಿಮಾನ ನಿಲ್ದಾಣ’ ಪ್ರಶಸ್ತಿ ಪಡೆದದ್ದು ಸಂತೋಷ ತಂದಿದೆ. ಕಾರ್ಯಾಚರಣೆಯ ಶ್ರೇಷ್ಠತೆ, ಸುಸ್ಥಿರತೆಯ ಉಪಕ್ರಮಗಳು ಮತ್ತು ತಡೆರಹಿತ ಸೌಲಭ್ಯ ನೀಡುವಲ್ಲಿ ಪ್ರಯಾಣಿಕರಿಗೆ ನಾವು ಎಂದಿಗೂ ಬದ್ಧರಾಗಿದ್ದೇವೆ. ನಮ್ಮ ಪ್ರಯಾಣದ ಭಾಗವಾಗಿದ್ದಕ್ಕಾಗಿ ಪ್ರಯಾಣಿಕರು, ಪಾಲುದಾರರು, ಮಧ್ಯಸ್ಥಗಾರರು ಮತ್ತು ಇಡೀ ತಂಡಕ್ಕೆ ಧನ್ಯವಾದಗಳು.” ಎಂದು ತಿಳಿಸಿದೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು (Kempegowda International Airport) ಟರ್ಮಿನಲ್ 2 ಅನ್ನು ಪ್ರಾರಂಭಿಸಿದಾಗಿನಿಂದ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಳ್ಳುತ್ತಲೇ ಇದೆ. ಈ ಟರ್ಮಿನಲ್ ನ್ನು ಉದ್ಯಾನದ ಥೀಮ್ ನಲ್ಲಿ ನಿರ್ಮಿಸಲಾಗಿದೆ.

ಯುನೆಸ್ಕೋದ (UNESCO) ಪ್ರಿಕ್ಸ್ ವರ್ಸೈಲ್ಸ್ ನೀಡಿದ ‘ಸುಂದರ ಒಳಾಂಗಣ ವಿಶೇಷ ಪ್ರಶಸ್ತಿ’ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ವಿಮಾನ ನಿಲ್ದಾಣವು ಪಡೆದುಕೊಂಡಿದೆ. ಇದು ಹೊಸ ಟರ್ಮಿನಲ್ 2 ಅನ್ನು ಅತ್ಯಂತ ಸುಂದರವಾದ ವಿಮಾನ ನಿಲ್ದಾಣದ ಟರ್ಮಿನಲ್‌ಗಳಲ್ಲಿ (Most Beautiful Airport Terminal) ಒಂದೆಂದು ಗುರುತಿಸಿದೆ.

ಏವಿಯೇಷನ್ ​​ಅನಾಲಿಟಿಕ್ಸ್ ಸಂಸ್ಥೆ ಸಿರಿಯಮ್ ಪ್ರಕಟಿಸಿದ ವರದಿಯಲ್ಲಿ ಇದು “ವಿಶ್ವದ ಅತ್ಯಂತ ಸಮಯೋಚಿತ ವಿಮಾನ ನಿಲ್ದಾಣ” (Punctual Airport) ಎಂಬ ಗೌರವಕ್ಕೆ ಪಾತ್ರವಾಗಿದೆ.

ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು (IGI) ಭಾರತದ ಅತಿದೊಡ್ಡ ವಿಮಾನ ನಿಲ್ದಾಣವಾಗಿದೆ ಮತ್ತು ನಾಲ್ಕು ರನ್‌ವೇಗಳನ್ನು ಹೊಂದಿದೆ. ದೇಶೀಯ ಮತ್ತು ಅಂತರಾಷ್ಟ್ರೀಯ ಪ್ರಯಾಣಿಕರಿಗೆ ವೈ-ಫೈ, ಉಪಹಾರಗಳು ಮತ್ತು ವ್ಯಾಪಾರ ಸೇವೆ, ವಿಶ್ರಾಂತಿ ಕೊಠಡಿ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸುತ್ತಿದೆ.

ನಾವೂ ಇನ್ ಸ್ಟಾಗ್ರಾಮ್ ನಲ್ಲೂ ಇದ್ದೀವಿ! ನಮ್ಮ ಗ್ರೂಪ್ ಜಾಯಿನ್ ಆಗಿ.

ನೀವು ಪ್ರವಾಸ ಹೋಗುವ ತಾಣದ ಮಾಹಿತಿ, ಕನ್ನಡ.ಟ್ರಾವೆಲ್ (Kannada.Travel) ಜಾಲತಾಣದಲ್ಲಿ ಪ್ರಕಟವಾಗುವ ಬರಹಗಳ ವಿವರ, ಅಪರೂಪದ ಟ್ರಾವೆಲರ್ ಗಳ ಪರಿಚಯ, ಪ್ರವಾಸಿ ತಾಣಗಳ ಕುತೂಹಲಕರ ಚಿತ್ರ ಬರಹ ಎಲ್ಲವೂ ಇಲ್ಲಿ ನಿಮಗೆ ಸಿಗುತ್ತದೆ. ಬನ್ನಿ ಜೊತೆಯಾಗಿ.

Related Articles

Leave a Reply

Your email address will not be published. Required fields are marked *

Back to top button