Moreವಿಂಗಡಿಸದ

ಬೆಂಗಳೂರಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಕರ್ನಾಟಕ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾರ್ಚ್‌ 1 ರಿಂದ 22 ರವರೆಗೆ ರಾಜ್ಯಾದ್ಯಂತ ನಡೆಯಲಿದೆ.

ವಿದ್ಯಾರ್ಥಿಗಳಿಗೆ ಪರೀಕ್ಷೆ ಕೇಂದ್ರಗಳು ಬೇರೆ ಬೇರೆ ಶಾಲಾ/ ಕಾಲೇಜುಗಳಲ್ಲಿ ನಿಗದಿಯಾಗಿರುವ ಹಿನ್ನೆಲೆಯಲ್ಲಿ , ಬೆಂಗಳೂರಿನ(Bangalore)ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ(Second PUC Students)ಸರ್ಕಾರ ಗುಡ್ ನ್ಯೂಸ್ ನೀಡಿದೆ.

ಬಿಎಂಟಿಸಿ (BMTC)ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸುವುದಾಗಿ ಘೋಷಣೆ ಮಾಡಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಉಚಿತ ಸೇವೆ(Free Service)ನೀಡಲಿದೆ.

ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ (Admission Ticket) ಉಚಿತವಾಗಿ ಪ್ರಯಾಣಿಸಬಹುದು.

ಬಿಎಂಟಿಸಿ ವೋಲ್ವೋ ಬಸ್ ಹೊರತುಪಡಿಸಿ ಇನ್ನುಳಿದ ಎಲ್ಲಾ ಬಿಎಂಟಿಸಿ ಬಸ್ ನಲ್ಲಿ ಮನೆಯಿಂದ ಪರೀಕ್ಷಾ ಕೇಂದ್ರದ ವರೆಗೆ (Exams Center) ಉಚಿತವಾಗಿ ಪ್ರಯಾಣಿಸಬಹದು.

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರವು ಬೇರೆ ಬೇರೆ ಕಾಲೇಜುಗಳಲ್ಲಿ ಇರುವುದರಿಂದ BMTC ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಈ ಸೌಲಭ್ಯಗಳನ್ನು ಕಲ್ಪಿಸಿದೆ ಎಂದು ತಿಳಿಸಿದೆ.

ವಿದ್ಯಾರ್ಥಿಗಳ ಅನುಕೂಲಕ್ಕೆ ಪರೀಕ್ಷಾ ಕೇಂದ್ರಗಳ ಮುಂದೆಯೇ ಸ್ಟಾಪ್ ಕೊಡಲು ಚಾಲಕ ಹಾಗೂ ನಿರ್ವಹಕರಿಗೆ ಸೂಚನೆ ನೀಡಲಾಗಿದೆ.

ಇನ್ನು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ಕೇಂದ್ರಗಳ ರೂಟ್ ನಲ್ಲಿ ಹೆಚ್ಚುವರಿ ಬಸ್ ಬಿಡಲು ಬಿಎಂಟಿಸಿ ಚಿಂತನೆ ನಡೆಸಿದೆ.

ಪರೀಕ್ಷಾ ಕೇಂದ್ರಗಳ ಮಾರ್ಗಗಳಲ್ಲಿ ಕಡ್ಡಾಯವಾಗಿ ಎಲ್ಲಾ ಮಾರ್ಗಗಳಲ್ಲೂ ಬಸ್ ಸೌಲಭ್ಯ ನೀಡಲಾಗುವುದು.

ಪರೀಕ್ಷಾ ಕೇಂದ್ರದ ಬಳಿ ವಿದ್ಯಾರ್ಥಿಗಳು ಅಥವಾ ಪೋಷಕರು ನಿಲುಗಡೆಯನ್ನು ಕೋರಿದರೆ ಬಸ್ ನಿಲುಗಡೆ ಮಾಡಬೇಕೆಂಬ ನಿಯಮ ತರಲಾಗಿದೆ.

ಹೀಗಾಗಿ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ತೆರಳಬಹುದು.

ಒಟ್ಟಿನಲ್ಲಿ ತಮ್ಮ ಭವಿಷ್ಯವನ್ನು ರೂಪಿಸುವ ನಿಟ್ಟಿನಲ್ಲಿ ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಈ ಕ್ರಮಗಳನ್ನು BMTC ಸಂಸ್ಥೆ ತೆಗೆದುಕೊಂಡಿದೆ.

ನಾವೂ ಇನ್ ಸ್ಟಾಗ್ರಾಮ್ ನಲ್ಲೂ ಇದ್ದೀವಿ! ನಮ್ಮ ಗ್ರೂಪ್ ಜಾಯಿನ್ ಆಗಿ.

ನೀವು ಪ್ರವಾಸ ಹೋಗುವ ತಾಣದ ಮಾಹಿತಿ, ಕನ್ನಡ.ಟ್ರಾವೆಲ್ (Kannada.Travel) ಜಾಲತಾಣದಲ್ಲಿ ಪ್ರಕಟವಾಗುವ ಬರಹಗಳ ವಿವರ, ಅಪರೂಪದ ಟ್ರಾವೆಲರ್ ಗಳ ಪರಿಚಯ, ಪ್ರವಾಸಿ ತಾಣಗಳ ಕುತೂಹಲಕರ ಚಿತ್ರ ಬರಹ ಎಲ್ಲವೂ ಇಲ್ಲಿ ನಿಮಗೆ ಸಿಗುತ್ತದೆ. ಬನ್ನಿ ಜೊತೆಯಾಗಿ.

Related Articles

Leave a Reply

Your email address will not be published. Required fields are marked *

Back to top button