ಇಂದಿನಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ
ವಿಶ್ವ ವಿಖ್ಯಾತ ಹಂಪಿ ಉತ್ಸವಕ್ಕೆ(Hampi Utsava)ಕ್ಷಣಗಣನೆ ಆರಂಭವಾಗಿದೆ. ಮೂರು ದಿನಗಳ ಕಾಲ ವಿಶ್ವ ಪಾರಂಪರಿಕ ತಾಣ(World Heritage site)ಹಂಪಿಯಲ್ಲಿ ಉತ್ಸವ ನಡೆಯಲಿದೆ.
ಇಂದು ಸಂಜೆ 8 ಗಂಟೆಗೆ ಸಿಎಂ ಸಿದ್ಧರಾಮಯ್ಯನವರು(Siddaramaiah )ಹಂಪಿ ಉತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
ಫೆಬ್ರವರಿ 2, 3 ಮತ್ತು 4 ರಂದು ಗ್ರಾಮೀಣ ಕ್ರೀಡೆಗಳು, ರಂಗೋಲಿ ಸ್ಪರ್ಧೆಗಳು, ಸಂಗೀತ, ಸಾಹಸ ಕ್ರೀಡೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಏಕಕಾಲದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ನಾಲ್ಕು ದೊಡ್ಡ ವೇದಿಕೆಗಳನ್ನು ರಚಿಸಲಾಗಿದೆ. ಹಂಪಿ ಉತ್ಸವದ ಸಂದರ್ಭದಲ್ಲಿ ಹಲವಾರು ಪ್ರಸಿದ್ಧ ಗಾಯಕರು ಮತ್ತು ಸಂಗೀತಗಾರರು ಪ್ರದರ್ಶನ ನೀಡಲಿದ್ದಾರೆ.
ಗಾಯತ್ರಿ ಪೀಠದ(Gayathri Peeta)ವೇದಿಕೆಯಲ್ಲಿ ಸಂಜೆ ಹಂಪಿ ಉತ್ಸವಕ್ಕೆ ಚಾಲನೆ ಸಿಗಲಿದೆ. ಕಲಾವಿದ, ನಟ , ಅರುಣ್ ಸಾಗರ್ (Arun Sagar)ಕಲ್ಪನೆಯಲ್ಲಿ ಬೃಹತ್ ವೇದಿಕೆ ನಿರ್ಮಾಣವಾಗಿದ್ದು, ಹಂಪಿಯ ಗೋಪುರ, ಉಗ್ರ ನರಸಿಂಹ, ಸೈನಿಕರು, ಆನೆಗಳ ಮಾದರಿಯ ವೇದಿಕೆ ಗಮನ ಸೆಳೆಯುತ್ತಿದೆ.
ನೀವು ಇದನ್ನು ಇಷ್ಟ ಪಡಬಹುದು:ಹಂಪಿಯ ಆಗಸದಲ್ಲಿ ಹಾರಾಡಲಿವೆ ಲೋಹದ ಹಕ್ಕಿಗಳು
ವೇದಿಕೆ ಮುಂಭಾಗ 25 ರಿಂದ 50 ಸಾವಿರ ಆಸನ ವ್ಯವಸ್ಥೆ ಮಾಡಲಾಗಿದ್ದು, ಹಂಪಿ ಉತ್ಸವಕ್ಕೆ ಬರಲು ಸಾರ್ವಜನಿಕರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಉತ್ಸವವನ್ನು ಜನೋತ್ಸವ ಆಗಿಸಲು ಜಿಲ್ಲಾಡಳಿತ ಸಕಲ ಸನ್ನದ್ಧವಾಗಿದೆ.
ಮೂರು ದಿನಗಳ ಕಾಲ ನಡೆಯುವ ಉತ್ಸವದಲ್ಲಿ ಪ್ರತಿಭೆಯನ್ನು ಪ್ರದರ್ಶಿಸಲು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿದೆ..
ಹೊಸಪೇಟೆಯ (Hosapete)ರಸ್ತೆಗಳಲ್ಲಿ ವಿಶೇಷ ಬೆಳಕಿನ ವ್ಯವಸ್ಥೆ ಮಾಡಲಾಗಿದ್ದು, ವಿದ್ಯುತ್ ದೀಪಗಳ ಅಲಂಕಾರ ಮಾಡಲಾಗಿದೆ. ಈ ಹಿಂದೆ ಪ್ರತಿ ವರ್ಷ ನವೆಂಬರ್ 3, 4 ಮತ್ತು 5 ರಂದು ಹಂಪಿ ಉತ್ಸವ ನಡೆಯುತ್ತಿತ್ತು.
ವಿಜಯನಗರ ಸಾಮ್ರಾಜ್ಯದ ಕುರುಹುಗಳನ್ನು ಆಕಾಶದಿಂದ ನೋಡಿ ಆನಂದಿಸಲು ಇಚ್ಛಿಸುವ ಪ್ರವಾಸಿಗರಿಗೆ ಫೆಬ್ರವರಿ 01ರಿಂದ ಹೆಲಿಕಾಪ್ಟರ್ ರೈಡ್ ಹಂಪಿ ಬೈ ಸ್ಕೈ (Hampi by Sky) ಆರಂಭವಾಗಿದೆ..
ಪ್ರತಿ ಪ್ರಯಾಣಿಕರಿಗೆ 4,229 ರೂ. ನಿಗದಿಪಡಿಸಲಾಗಿದೆ. ಹೆಲಿಕಾಪ್ಟರ್ ರೈಡ್ಗೆ ಪ್ರತಿ ಬಾರಿ ಐದರಿಂದ ಆರು ಪ್ರಯಾಣಿಕರಿಗೆ ಅವಕಾಶ ಕಲ್ಪಿಸಲಾಗುತ್ತಿದೆ.
ನಾವೂ ಇನ್ ಸ್ಟಾಗ್ರಾಮ್ ನಲ್ಲೂ ಇದ್ದೀವಿ! ನಮ್ಮ ಗ್ರೂಪ್ ಜಾಯಿನ್ ಆಗಿ.
ನೀವು ಪ್ರವಾಸ ಹೋಗುವ ತಾಣದ ಮಾಹಿತಿ, ಕನ್ನಡ.ಟ್ರಾವೆಲ್ (Kannada.Travel) ಜಾಲತಾಣದಲ್ಲಿ ಪ್ರಕಟವಾಗುವ ಬರಹಗಳ ವಿವರ, ಅಪರೂಪದ ಟ್ರಾವೆಲರ್ ಗಳ ಪರಿಚಯ, ಪ್ರವಾಸಿ ತಾಣಗಳ ಕುತೂಹಲಕರ ಚಿತ್ರ ಬರಹ ಎಲ್ಲವೂ ಇಲ್ಲಿ ನಿಮಗೆ ಸಿಗುತ್ತದೆ. ಬನ್ನಿ ಜೊತೆಯಾಗಿ.