ವಿಂಗಡಿಸದಸಂಸ್ಕೃತಿ, ಪರಂಪರೆಸ್ಮರಣೀಯ ಜಾಗ

75 ನೇ ಗಣತಂತ್ರ ದಿನದ ವಿಶೇಷತೆಗಳೇನು ಗೊತ್ತಾ..?

ಭಾರತವು ಪ್ರತಿ ವರ್ಷ ಜನವರಿ 26ರಂದು ಗಣರಾಜ್ಯೋತ್ಸವ ದಿನವನ್ನು ಆಚರಿಸುತ್ತದೆ. ಈ ವರ್ಷ ಭಾರತವು 75ನೇ ವರ್ಷದ ಗಣರಾಜ್ಯೋತ್ಸವದ ಸಂಭ್ರಮದ ಹೊಸ್ತಿಲಿನಲ್ಲಿದೆ.

ಗಣರಾಜ್ಯೋತ್ಸವದ ಪ್ರಯುಕ್ತ ರಾಷ್ಟ್ರ ರಾಜಧಾನಿ ದೆಹಲಿ ಕರ್ತವ್ಯ ಪಥ (ರಾಜಪಥ)ದಲ್ಲಿ ಪಥಸಂಚಲನ ನಡೆಯಲಿದೆ. ಈ ಸಂದರ್ಭದಲ್ಲಿ ವಿವಿಧ ರಾಜ್ಯಗಳ ಸಾಂಸ್ಕೃತಿಕ ಮೆರಗನ್ನು ಸಾರುವ ಸ್ತಬ್ಧ ಚಿತ್ರಗಳ ಪ್ರದರ್ಶನವನ್ನೂ ಮಾಡಲಾಗುತ್ತದೆ.

ಭಾರತೀಯರು ಪ್ರತಿ ವರ್ಷ ಗಣರಾಜ್ಯೋತ್ಸವದ ದಿನದಂದು (Republic Day 2024) ಸ್ತಬ್ಧಚಿತ್ರಗಳ ಪ್ರದರ್ಶನದ ಮೂಲಕ ಭಾರತದ ಶ್ರೀಮಂತ ಸಂಸ್ಕೃತಿ , ಪರಂಪರೆ , ದೇಶವು ಸಾಧಿಸಿದ ಪ್ರಗತಿ ಹಾಗೂ ಸಾಧನೆಗಳನ್ನು ಸಾರುತ್ತಲೇ ಬಂದಿದ್ದಾರೆ.

ಭಾರತೀಯ ವಾಯುಸೇನೆ, ನೌಕಾಪಡೆ ಹಾಗೂ ಭೂಸೇನೆಯ ಮೈನವರೇಳಿಸುವ ಪ್ರದರ್ಶನಗಳು ಕೂಡ ಗಣರಾಜ್ಯೋತ್ಸವ ದಿನಾಚರಣೆಯ ಪ್ರಮುಖ ಆಕರ್ಷಣೆಗಳ ಪೈಕಿ ಒಂದಾಗಿದೆ.

ಗಣರಾಜ್ಯೋತ್ಸವ ದಿನಾಚರಣೆಯ ಇತಿಹಾಸ:

1950ರ ಜನವರಿ 26ರಂದು ಭಾರತೀಯ ಸಂವಿಧಾನವನ್ನು ಔಪಚಾರಿಕವಾಗಿ ಅಂಗೀಕರಿಸಲಾಯಿತು. ಹೀಗಾಗಿ ಅಂದಿನಿಂದ ಜನವರಿ 26ನ್ನು ಗಣರಾಜ್ಯೋತ್ಸವ ದಿನವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ.

ಸಂವಿಧಾನ ಶಿಲ್ಪಿ ಬಿ. ಆರ್‌. ಅಂಬೇಡ್ಕರ್ ರಚಿಸಿದ ಭಾರತೀಯ ಸಂವಿಧಾನವು 1950ರ ಜನವರಿ 26ರಂದು ಜಾರಿಗೆ ಬಂದಿತು. 1946ರ ಡಿಸೆಂಬರ್ 9ರಂದು ಭಾರತದ ಮೊಟ್ಟ ಮೊದಲ ಸಂವಿಧಾನ ಸಂಬಂಧಿ ಸಭೆ ನಡೆಸಲಾಯಿತು.

1949ರ ನವೆಂಬರ್ 26ರಂದು ಅಂತಿಮ ಬಾರಿ ಸಭೆ ಸೇರಿತು. ಈ ದಿನವನ್ನು ಸಂವಿಧಾನ ದಿನವಾಗಿಯೂ ಆಚರಿಸಲಾಗುತ್ತದೆ.

1950ರ ಜನವರಿ 26ರಂದು ಭಾರತವು ಗಣರಾಜ್ಯವಾಗಿದೆ ಎಂಬುದನ್ನು ತಿಳಿಸಲು ಅಂದಿನ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಭಾರತದ ಬಾವುಟವನ್ನು ಹಾರಿಸಿದ್ದರು.

ಈ ದಿನದಂದು ಭಾರತವು ಗಣರಾಜ್ಯವಾಗಿ ಕರೆಸಿಕೊಂಡ ಹಿನ್ನೆಲೆಯಲ್ಲಿ ಈ ದಿನವನ್ನು ರಾಷ್ಟ್ರೀಯ ಹಬ್ಬದ ದಿನವನ್ನಾಗಿ ಪರಿಗಣಿಸವಂತೆ ನಿರ್ಧರಿಸಲಾಯ್ತು.

ಈ ದಿನದಂದು, ಅಧ್ಯಕ್ಷರು ರಾಷ್ಟ್ರಧ್ವಜವನ್ನು ಹಾರಿಸುತ್ತಾರೆ ಮತ್ತು ನಂತರ ಅದ್ಭುತವಾದ ಮಿಲಿಟರಿ ಮತ್ತು ಸಾಂಸ್ಕೃತಿಕ ವೈಭವವನ್ನು ಪ್ರದರ್ಶಿಸುತ್ತಾರೆ. ಹಾಗೆಯೇ ಭಾರತದ ರಾಷ್ಟ್ರಪತಿಗಳು ದೇಶದ ಅರ್ಹ ನಾಗರಿಕರಿಗೆ ಪದ್ಮ ಪ್ರಶಸ್ತಿಗಳನ್ನು ವಿತರಿಸುತ್ತಾರೆ ಮತ್ತು ವೀರ ಸೈನಿಕರಿಗೆ ಪರಮವೀರ ಚಕ್ರ, ಅಶೋಕ ಚಕ್ರ ಮತ್ತು ವೀರ ಚಕ್ರವನ್ನು ನೀಡಲಾಗುತ್ತದೆ.

ಮೆರವಣಿಗೆ ಸಮಯ ಮತ್ತು ಥೀಮ್:

ಗಣರಾಜ್ಯೋತ್ಸವ 2024ರ ಪರೇಡ್ ಥೀಮ್ ‘ವಿಕ್ಷಿತ್ ಭಾರತ್’ ಮತ್ತು ‘ಭಾರತ್ – ಲೋಕತಂತ್ರ ಕಿ ಮಾತೃಕಾ’, ಇದು ಪ್ರಜಾಪ್ರಭುತ್ವದ ಪೋಷಕರಾಗಿ ಭಾರತದ ಪಾತ್ರವನ್ನು ಒತ್ತಿಹೇಳುತ್ತದೆ ಮತ್ತು ಜನವರಿ 26 ರಂದು ಶುಕ್ರವಾರ ಬೆಳಿಗ್ಗೆ 10:30 ಕ್ಕೆ ನವದೆಹಲಿಯ ಕರ್ತವ್ಯ ಪಥ್‌ನಲ್ಲಿ ಪ್ರಾರಂಭವಾಗಲಿದೆ.

ಮೆರವಣಿಗೆಯಲ್ಲಿ 95-ಸದಸ್ಯ ಮೆರವಣಿಗೆಯ ತುಕಡಿ ಮತ್ತು 33-ಸದಸ್ಯ ಬ್ಯಾಂಡ್ ತುಕಡಿ ಕೂಡ ಇರುತ್ತದೆ.ಇದು ಸುಮಾರು 90 ನಿಮಿಷಗಳವರೆಗೆ ಇರುತ್ತದೆ ಎಂದು ನಿರೀಕ್ಷಿಸಲಾಗಿದೆ. ಈ ಸ್ಥಳವು 77,000 ಆಸನ ಸಾಮರ್ಥ್ಯವನ್ನು ಹೊಂದಿದ್ದು, 42,000 ಆಸನಗಳನ್ನು ಸಾರ್ವಜನಿಕರಿಗೆ ಕಾಯ್ದಿರಿಸಲಾಗಿದೆ.

ನಾವೂ ಇನ್ ಸ್ಟಾಗ್ರಾಮ್ ನಲ್ಲೂ ಇದ್ದೀವಿ! ನಮ್ಮ ಗ್ರೂಪ್ ಜಾಯಿನ್ ಆಗಿ.

ನೀವು ಪ್ರವಾಸ ಹೋಗುವ ತಾಣದ ಮಾಹಿತಿ, ಕನ್ನಡ.ಟ್ರಾವೆಲ್ (Kannada.Travel) ಜಾಲತಾಣದಲ್ಲಿ ಪ್ರಕಟವಾಗುವ ಬರಹಗಳ ವಿವರ, ಅಪರೂಪದ ಟ್ರಾವೆಲರ್ ಗಳ ಪರಿಚಯ, ಪ್ರವಾಸಿ ತಾಣಗಳ ಕುತೂಹಲಕರ ಚಿತ್ರ ಬರಹ ಎಲ್ಲವೂ ಇಲ್ಲಿ ನಿಮಗೆ ಸಿಗುತ್ತದೆ. ಬನ್ನಿ ಜೊತೆಯಾಗಿ.

Related Articles

Leave a Reply

Your email address will not be published. Required fields are marked *

Back to top button