ದೀಪಾವಳಿ ಹಬ್ಬಕ್ಕೆ ಬೆಂಗಳೂರಿನಿಂದ ಈ ಊರುಗಳಿಗೆ ವಿಶೇಷ ರೈಲು ವ್ಯವಸ್ಥೆ.
ದೀಪಾವಳಿ ಹಬ್ಬದ ಪ್ರಯುಕ್ತ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ – ಕಾರವಾರ (Visvesvaraya Terminal – Karwar) ಮತ್ತು ಯಶವಂತಪುರ – ಮಂಗಳೂರು (Yesvantpur – Mangalore) ಜಂಕ್ಷನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು (Indian Railways) ಓಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ವಿಶೇಷ ರೈಲುಗಳ (Special Trains) ವಿವರಗಳು ಈ ಕೆಳಗಿನಂತಿವೆ.
- ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ – ಕಾರವಾರ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ (06597 / 98) ರೈಲು ಸಂಚಾರವಾಗಲಿದೆ..
ರೈಲು ಸಂಖ್ಯೆ 06597 ಈ ರೈಲು ಅಕ್ಟೋಬರ್ 30, 2024 ರಂದು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (Visvesvaraya Terminal) ನಿಂದ ಮಧ್ಯಾಹ್ನ 1 ಗಂಟೆಗೆ ಹೊರಡಲಿರುವ.
ಈ ರೈಲು ಚಿಕ್ಕಬಾಣಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟವಾಳ, ಸುರತ್ಕಲ್, ಮೂಲ್ಕಿ, ಉಡುಪಿ (Udupi) , ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್ (Gokarna Road) ಮತ್ತು ಅಂಕೋಲಾ ನಿಲ್ದಾಣಗಳ ಮಾರ್ಗವಾಗಿ ಹೊರಟು ಮರುದಿನ ಬೆಳಗಿನ ಜಾವ 4 ಗಂಟೆಗೆ ಕಾರವಾರ ನಿಲ್ದಾಣವನ್ನು ತಲುಪಲಿದೆ..
ನೀವು ಇದನ್ನು ಓದಬಹುದು:ಇಂದು ಪುರಿಯಲ್ಲಿ ಜಗನ್ನಾಥ ಹೆರಿಟೇಜ್ ಕಾರಿಡಾರ್ ಯೋಜನೆ ಲೋಕಾರ್ಪಣೆ;
ಅಕ್ಟೋಬರ್ 31, 2024 ರಂದು ಮಧ್ಯಾಹ್ನ 12 ಗಂಟೆಗೆ ಕಾರವಾರದಿಂದ ಹೊರಡಲಿರುವ ರೈಲು ಅದೇ ಮಾರ್ಗವಾಗಿ, ಮರುದಿನ ಬೆಳಗಿನ ಜಾವ್ 4 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.
• ಯಶವಂತಪುರ – ಮಂಗಳೂರು (Yesvantpur – Mangalore) ಜಂಕ್ಷನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ (06565 / 66) ರೈಲು ಸಂಚಾರವಾಗಲಿದೆ.
ರೈಲು ಸಂಖ್ಯೆ 06565 ಈ ರೈಲು ಅಕ್ಟೋಬರ್ 30, 2024 ರಂದು ಯಶವಂತಪುರದಿಂದ ರಾತ್ರಿ 11.50ಕ್ಕೆ ಹೊರಡಲಿದ್ದು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್(Subrahmanya Road), ಕಬಕ ಪುತ್ತೂರು, ಬಂಟ್ವಾಳ ನಿಲ್ದಾಣಗಳ ಮಾರ್ಗವಾಗಿ ಮರುದಿನ ಬೆಳಗ್ಗೆ 11.45ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.
ಇದೇ ರೈಲು (06566) ಅಕ್ಟೋಬರ್ 31, 2024 ರಂದು ಮಧ್ಯಾಹ್ನ 1 ಗಂಟೆಗೆ ಮಂಗಳೂರು ಜಂಕ್ಷನ್ ನಿಂದ ಹೊರಡಲಿದ್ದು ಅದೇ ಮಾರ್ಗವಾಗಿ ಅದೇ ದಿನ ರಾತ್ರಿ 9:15 ಕ್ಕೆ ಯಶವಂತಪುರವನ್ನು ತಲುಪಲಿದೆ.
ಪ್ರಯಾಣಿಕರು www.enquiry.indianrail.gov.in ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಥವಾ NTES ಅಪ್ಲಿಕೇಶನ್ ಬಳಸಿ ಅಥವಾ 139 ಗೆ ಡಯಲ್ ಮಾಡುವ ಮೂಲಕ ರೈಲುಗಳ ಆಗಮನ / ನಿರ್ಗಮನದ ಸಮಯ ಮತ್ತು ಇತರ ವಿವರಗಳನ್ನು ಪರಿಶೀಲಿಸಬಹುದಾಗಿದೆ.
ನಾವೂ ಇನ್ ಸ್ಟಾಗ್ರಾಮ್ ನಲ್ಲೂ ಇದ್ದೀವಿ! ನಮ್ಮ ಗ್ರೂಪ್ ಜಾಯಿನ್ ಆಗಿ.
ನೀವು ಪ್ರವಾಸಕ್ಕೆ ಹೋಗುವ ತಾಣದ ಮಾಹಿತಿ, ಕನ್ನಡ.ಟ್ರಾವೆಲ್ ( Kannada.Travel ) ಜಾಲತಾಣದಲ್ಲಿ ಪ್ರಕಟವಾಗುವ ಬರಹಗಳ ವಿವರ, ಅಪರೂಪದ ಟ್ರಾವೆಲರ್ ಗಳ ಪರಿಚಯ, ಪ್ರವಾಸಿ ತಾಣಗಳ ಕುತೂಹಲಕರ ಚಿತ್ರ ಬರಹ ಎಲ್ಲವೂ ಇಲ್ಲಿ ನಿಮಗೆ ಸಿಗುತ್ತದೆ. ಬನ್ನಿ ಜೊತೆಯಾಗಿ.