ವಿಂಗಡಿಸದ

ಮತ್ತೇ ಕೋವಿಡ್ ಸಂಖ್ಯೆ ಹೆಚ್ಚಳ; ಸರ್ಕಾರದ ಮಾರ್ಗಸೂಚಿ ಪ್ರಕಟ

ದೇವರ ಸ್ವಂತ ನಾಡು ಕೇರಳದಲ್ಲಿ (Kerala)ಕೋವಿಡ್ ಸೋಂಕಿನ (Covid virus) ಗಣನೀಯವಾಗಿ ಏರಿಕೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಅಕ್ಕ ಪಕ್ಕದ ರಾಜ್ಯಗಳಲ್ಲಿಯೂ ಅಲ್ಲಿನ ಸರಕಾರಗಳು ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳುವುದಕ್ಕೆ ಮುಂದಾಗಿವೆ.

ಕರ್ನಾಟಕದಲ್ಲಿಯೂ (karnaraka) ಸಕ್ರಿಯ ಪ್ರಕರಣಗಳು ಕಂಡು ಬರುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಒಂದಿಷ್ಟು ಮಾರ್ಗಸೂಚಿಗಳನ್ನು ಹೊರಡಿಸಿದೆ.

ಇನ್ನು ಕೋರೋನಾ ರೂಪಾಂತರಿ ಜೆ ಎನ್ 1 ಸೋಂಕು ಕಂಡು ಕೇರಳದಲ್ಲಿ ಕಂಡು ಬಂದಿದೆ. ಹೀಗಾಗಿ ಕರುನಾಡಿನಲ್ಲಿಯೂ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದಕ್ಕೆ ಸರಕಾರ ಮುಂದಾಗಿದ್ದು, ರಾಜ್ಯ ಸರಕಾರ ತಜ್ಞರ ಸಭೆ ನಡೆಸಿ ಜನರಿಗೆ ಕೆಲವೊಂದು ನಿರ್ದೇಶನಗಳನ್ನು ಹೊರಡಿಸಿದ್ದು ಯಾರು ಅಂತಕ ಪಡಬೇಕಾಗಿಲ್ಲ ಎಂದಿದೆ.

ರಾಜ್ಯ ಸರಕಾರದ ಮಾರ್ಗಸೂಚಿಗಳು

60 ವರ್ಷ ಮೇಲ್ಪಟ್ಟವರು, ಅನಾರೋಗ್ಯದಿಂದ ಬಳಲುತ್ತಿರುವವರು ಮಾಸ್ಕ್ ಧರಿಸಲು ಸೂಚನೆ

ಕಿಡ್ನಿ ಹೃದಯ, ಲಿವರ್ ಸಮಸ್ಯೆ ಎದುರಿಸುತ್ತಿರುವ ವೃದ್ಧರು ಮಾಸ್ಕ್ ಧರಿಸಬೇಕು.

ಸೋಂಕಿನ ಲಕ್ಷಣ ಕಂಡು ಬಂದಲ್ಲಿ ಅದನ್ನು ನಿರ್ಲಕ್ಷಿಸದೆ ಪರೀಕ್ಷೆ ಮಾಡಿಕೊಳ್ಳಲು ಸಲಹೆ.

ಸರಕಾರ ಎರಡು ರೀತಿಯ ಸುತ್ತೋಲೆ ಹೊರಡಿಸಿದೆ.

ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿ, ಸಿಇಒ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮಾರ್ಗಸೂಚಿ ಕೋವಿಡ್ ಸರ್ವೇಕ್ಷಣೆ ಹಾಗೂ ಮೇಲುಸ್ತುವಾರಿ ಕೈಗೊಳ್ಳುವ ನಿಟ್ಟಿನಲ್ಲಿ ಸುತ್ತೋಲೆ

ಮತ್ತೊಂದು ಸಾರ್ವಜನಿಕ ಸಲಹಾ ಮಾರ್ಗಸೂಚಿ ಪ್ರಕಟ. ಕೋವಿಡ್ ಹೆಚ್ಚಳ ಆಗ್ತಿರುವ ಕಾರಣಕ್ಕೆ ಸಾರ್ವಜನಿಕರಿಗೆ ಪ್ರತ್ಯೇಕ ಮಾರ್ಗಸೂಚಿ

ಈಗಾಗಲೇ ರಾಜ್ಯ ಸರಕಾರ ಎಲ್ಲ ಆಸ್ಪತ್ರೆಗಳಿಗೆ ಪರಿಸ್ಥಿಯನ್ನು ಎದುರಿಸಲು ಸನ್ನದ್ಧವಾಗಿರಲು ಸೂಚನೆ ನೀಡಿದೆ.

ನೀವು ಇದನ್ನು ಇಷ್ಟ ಪಡಬಹುದು:ಚೀನಾದಲ್ಲಿ ನಿಗೂಢ ನ್ಯುಮೋನಿಯಾ; ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದಲ್ಲಿ ಅಲರ್ಟ್

ಈ ಮಧ್ಯೆಯೇ ರಾಜ್ಯದಲ್ಲಿಯೂ ಸೋಂಕು ಪತ್ತೆಯಾಗಿದ್ದು, ಕ್ರಿಸ್ಮಸ್ ,ಹೊಸ ವರ್ಷಕ್ಕೆ ಪ್ರತ್ಯೇಕ ಗೈಡ್ ಲೈನ್ಸ್ ಹೊರಡಿಸಬಹುದು ಅಂತ ಹೇಳಲಾಗುತ್ತಿತ್ತು. ಆದರೆ ಪರಿಸ್ಥಿತಿ ನೋಡಿಕೊಂಡು ಸರಕಾರ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಮುಂದಾಗಿದ್ದು ಸದ್ಯಕ್ಕೆ ಕ್ರಿಸ್ಮಸ್ ,ಹೊಸ ವರ್ಷ ಆಚರಣೆಯ ಮಾರ್ಗ ಸೂಚಿ ಪ್ರಕಟಿಸಿಲ್ಲ.

Guidlines

ನಾವೂ ಇನ್ ಸ್ಟಾಗ್ರಾಮ್ ನಲ್ಲೂ ಇದ್ದೀವಿ! ನಮ್ಮ ಗ್ರೂಪ್ ಜಾಯಿನ್ ಆಗಿ.

ನೀವು ಪ್ರವಾಸ ಹೋಗುವ ತಾಣದ ಮಾಹಿತಿ, ಕನ್ನಡ.ಟ್ರಾವೆಲ್ (Kannada.Travel) ಜಾಲತಾಣದಲ್ಲಿ ಪ್ರಕಟವಾಗುವ ಬರಹಗಳ ವಿವರ, ಅಪರೂಪದ ಟ್ರಾವೆಲರ್ ಗಳ ಪರಿಚಯ, ಪ್ರವಾಸಿ ತಾಣಗಳ ಕುತೂಹಲಕರ ಚಿತ್ರ ಬರಹ ಎಲ್ಲವೂ ಇಲ್ಲಿ ನಿಮಗೆ ಸಿಗುತ್ತದೆ. ಬನ್ನಿ ಜೊತೆಯಾಗಿ.

Related Articles

Leave a Reply

Your email address will not be published. Required fields are marked *

Back to top button