Moreವಿಂಗಡಿಸದ

ಪ್ರವಾಸೋದ್ಯಮ ಕ್ಷೇತ್ರಕ್ಕೆ ರಾಜ್ಯ ಸರ್ಕಾರದಿಂದ ಬಂಪರ್‌ ಘೋಷಣೆ

ಕರ್ನಾಟಕ ಬಜೆಟ್‌ 2024 (Karnataka Budget 2024) ಮೂಲಕ ಸಿಎಂ ಸಿದ್ದರಾಮಯ್ಯ (CM siddaramaiah) ಪ್ರವಾಸೋದ್ಯಮಕ್ಕೆ ಒತ್ತು ನೀಡಿದ್ದಾರೆ.

ಕಲಬುರಗಿ, ಬೀದರ್‌, ಗದಗ, ಗೋಕಾಕ, ಬಂಡೀಪುರ, ನಾಗರಹೊಳೆ ಸಹಿತ ಹಲವು ಕಡೆ ಪ್ರವಾಸಿ ಯೋಜನೆ. ಮೂಲಸೌಕರ್ಯ ಕಾರ್ಯಕ್ರಮ ಪ್ರಕಟಿಸಿದ್ದಾರೆ.

ಪೌರಾಣಿಕ ಹಾಗೂ ಐತಿಹಾಸಿಕವಾಗಿ ಪ್ರಖ್ಯಾತಿ ಹೊಂದಿರುವ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟ (Anjanadri Hill) ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಸಿ ಸೌಲಭ್ಯ ಅಭಿವೃದ್ಧಿಪಡಿಸಲು 100 ಕೋಟಿ ರೂ.ಗಳನ್ನು ಒದಗಿಸಲಾಗಿದೆ.

ರಾಜ್ಯದ ಪ್ರಮುಖ ಜಲಾಶಯಗಳಲ್ಲಿನ ಹಿನ್ನೀರಿನಲ್ಲಿ ಮತ್ತು ಕಡಲ ತೀರಗಳಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಜಲ ಕ್ರೀಡೆಗಳು ಮತ್ತು ಜಲಸಾಹಸ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲಾಗುವುದು ಎಂದಿದ್ದಾರೆ.

ಸಾಹಸ ಪ್ರವಾಸೋದ್ಯವನ್ನು ಉತ್ತೇಜಿಸಲು ರಾಜ್ಯದ ಪ್ರಮುಖ 10 ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕೇಬಲ್ ಕಾರ್/ ರೋಪ್ ವೇ(Rope Way) ಸೌಲಭ್ಯ ಅಭಿವೃದ್ಧಿಪಡಿಸಲಾಗುವುದು.

ಗೋಕಾಕ ಜಲಪಾತವನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿ ಪಡಿಸಲಾಗುವುದು.

ರಾಜ್ಯದ 530 ಸಂರಕ್ಷಿತ ಸ್ಮಾರಕಗಳನ್ನು 3ಡಿ ಲೇಸರ್ ಸ್ಕ್ಯಾನಿಂಗ್ ಮೂಲಕ ಡಿಜಿಟಲ್ ದಾಖಲೀಕರಣ ಮಾಡಲಾಗಿದೆ.

ಈ ಕಾರ್ಯವನ್ನು ದೇಶದಲ್ಲಿಯೇ ಪ್ರಥಮವಾಗಿ ಕೈಗೊಂಡಿರುವ ಶ್ರೇಯಸ್ಸು ನಮ್ಮ ರಾಜ್ಯದ್ದಾಗಿದೆ.

ಈ ಡಿಜಿಟಲ್ ಮಾಹಿತಿಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಮತ್ತು ಸಂವಾದಾತ್ಮಕವಾಗಿ ಅಭಿವೃದ್ಧಿಪಡಿಸಲು ಕ್ರಮವಹಿಸಲಾಗುವುದು.

ರಾಜ್ಯದಲ್ಲಿ ಪರಿಸರ ಪ್ರವಾಸೋದ್ಯಮವನ್ನು ಉತ್ತೇಜಿಸಲು ಬಂಡೀಪುರ, ದಾಂಡೇಲಿ ಮತ್ತು ಕಬಿನಿಯಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಇಂಟರ್‌ಪ್ರಿಟೇಷನ್ ಸೆಂಟರ್‌ಗಳನ್ನು ಜೆ.ಎಲ್.ಆರ್ ಸಂಸ್ಥೆಯ ಮೂಲಕ ನಿರ್ಮಾಣ ಮಾಡಲಾಗುವುದು.

ಗದಗ ಜಿಲ್ಲೆಯ ಕಪ್ಪತ್ತಗುಡ್ಡದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುವುದು. ಶ್ರೀ ಕ್ಷೇತ್ರ ರೇಣುಕಾ ಯಲ್ಲಮ್ಮನ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ಸಂರಕ್ಷಿಸಿ ಅಭಿವೃದ್ಧಿಗೊಳಿಸಲು ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯನ್ನು ರಚಿಸಿ ಅಧಿಸೂಚನೆ ಹೊರಡಿಸಲಾಗಿದೆ .

ಕಲಬುರಗಿಯಲ್ಲಿ ವಚನ ಮಂಟಪ ನಿರ್ಮಿಸಲಾಗುವುದು. ಜಾನಪದ ಕಲೆಗಳ ಪುನರುಜ್ಜೀವನಕ್ಕೆ ಅನುದಾನ, ನಾರಾಯಣಗುರು, ಜ್ಯೋತಿಬಾ ಫುಲೆ, ಪೆರಿಯಾರ್, ರಾಮಸ್ವಾಮಿ, ಲೋಹಿಯಾ ಬರಹ ಕನ್ನಡಕ್ಕೆ ಅನುವಾದಕ್ಕೆ ಕ್ರಮ. ಕೀರ್ತನೆಗಳ ಪ್ರಚಾರಕ್ಕೆ 1 ಕೋಟಿ ರೂ.

ಕಲಬುರಗಿ ವಿವಿಯಲ್ಲಿ ತತ್ವಪದ, ಸೂಫಿ ಅಧ್ಯಯನ ಪೀಠ ಸ್ಥಾಪನೆ. ಸರ್ವಜ್ಞ ಸ್ಮಾರಕ ಅಭಿವೃದ್ಧಿಗೆ ಅನುದಾನ, ಕೋಲಾರದ ಅದಿಮ ಸಾಂಸ್ಕೃತಿಕ ಕೇಂದ್ರದ ಅಭಿವೃದ್ಧಿ ಮಾಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

ರಾಜ್ಯದ ಮೂರು ಜಿಲ್ಲೆಗಳಲ್ಲಿ ಆಹಾರ ಪಾರ್ಕ್ ನಿರ್ಮಾಣ ಮಾಡಲಾಗುವುದು. ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ, ಬೆಂಗಳೂರು ಗ್ರಾ. ಜಿಲ್ಲೆ ಮೂಗೆನಹಳ್ಳಿ ಬಳಿ ಆಹಾರ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.

ಬೆಂಗಳೂರಿನ ಹೊರವಲಯದಲ್ಲಿರುವ ಐತಿಹಾಸಿಕ ದೇವಿಕಾರಾಣಿ ಎಸ್ಟೇಟ್‌ ಪ್ರದೇಶದಲ್ಲಿ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲು ಆದ್ಯತೆ. ಇದು ಪಾರಂಪರಿಕ, ಪುರಾತತ್ವ ಇಲಾಖೆ ಅಡಿಯಲ್ಲಿರುವ ಪ್ರವಾಸಿ ತಾಣ.

ಬಾಗಲಕೋಟೆಯ ಐಹೊಳೆ ಪುರಾತನ ತಾಣ. ಇಲ್ಲಿಗೆ ನಿತ್ಯ ನೂರಾರು ಪ್ರವಾಸಿಗರು ಬರುತ್ತಾರೆ. ಕೆ.ಎಸ್.ಟಿ.ಡಿ.ಸಿ ವತಿಯಿಂದ ಐಹೊಳೆಯಲ್ಲಿ ಸುಸಜ್ಜಿತವಾದ ಹೋಟೆಲ್‌ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ.

ಬೀದರ್‌ ಹಾಗೂ ವಿಜಯಪುರದಲ್ಲಿ ಕರೇಜ್‌ ಎಂದು ಪ್ರಸಿದ್ಧವಾಗಿರುವ ಪುರಾತನ ನೀರು ಸರಬರಾಜು ವ್ಯವಸ್ಥೆಯನ್ನು ನುರಿತ ಸಂಸ್ಥೆಗಳ ತಾಂತ್ರಿಕ ನೆರವಿನೊಂದಿಗೆ 15 ಕೋಟಿ ರೂ. ವೆಚ್ಚದಲ್ಲಿ ಪುನಶ್ಚೇತನಕ್ಕೆ ಒತ್ತು.

ರಾಜ್ಯದಲ್ಲಿ ಪರಿಸರ ಪ್ರವಾಸೋದ್ಯಮವನ್ನು ಉತ್ತೇಜಿಸಲು ನಾರಹೊಳೆಯ ಕಬಿನಿ, ಚಾಮರಾಜನಗರ ಜಿಲ್ಲೆಯ ಬಂಡೀಪುರ (Bandipur), ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ (Dandeli) ಮತ್ತು 25 ಕೋಟಿ ರೂ. ವೆಚ್ಚದಲ್ಲಿ ಇಂಟರ್‌ಪ್ರಿಟೇಷನ್‌ ಸೆಂಟರ್‌ಗಳನ್ನು ಜೆ.ಎಲ್.ಆರ್‌ ಸಂಸ್ಥೆಯ ಮೂಲಕ ನಿರ್ಮಾಣ ಮಾಡಲು ಆದ್ಯತೆ.

ರಾಷ್ಟ್ರಕೂಟರ ಕಾಲದಲ್ಲಿ ಕರ್ನಾಟಕದ ಮೊಟ್ಟ ಮೊದಲ ವಿಶ್ವವಿದ್ಯಾಲಯವನ್ನು ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲ್ಲೂಕಿನ ನಾಗಾವಿಯಲ್ಲಿ ಸ್ಥಾಪಿಸಲಾಗಿತ್ತು ಎಂಬುದು ಸ್ಥಳೀಯರ ನಂಬಿಕೆ.

ಅಲ್ಲಿನ ಪ್ರಾಚ್ಯಾವೇಶಗಳ ಸಂಶೋಧನೆ ಮತ್ತು ಸಂರಕ್ಷಣೆಗಾಗಿ ನೆರವು ನೀಡಲು Archaeological Survey of India (ASI) ಗೆ ಶಿಫಾರಸ್ಸು ಮಾಡಲಾಗುವುದು.

ನಾವೂ ಇನ್ ಸ್ಟಾಗ್ರಾಮ್ ನಲ್ಲೂ ಇದ್ದೀವಿ! ನಮ್ಮ ಗ್ರೂಪ್ ಜಾಯಿನ್ ಆಗಿ.

ನೀವು ಪ್ರವಾಸ ಹೋಗುವ ತಾಣದ ಮಾಹಿತಿ, ಕನ್ನಡ.ಟ್ರಾವೆಲ್ (Kannada.Travel) ಜಾಲತಾಣದಲ್ಲಿ ಪ್ರಕಟವಾಗುವ ಬರಹಗಳ ವಿವರ, ಅಪರೂಪದ ಟ್ರಾವೆಲರ್ ಗಳ ಪರಿಚಯ, ಪ್ರವಾಸಿ ತಾಣಗಳ ಕುತೂಹಲಕರ ಚಿತ್ರ ಬರಹ ಎಲ್ಲವೂ ಇಲ್ಲಿ ನಿಮಗೆ ಸಿಗುತ್ತದೆ. ಬನ್ನಿ ಜೊತೆಯಾಗಿ.

Related Articles

Leave a Reply

Your email address will not be published. Required fields are marked *

Back to top button