ದೂರ ತೀರ ಯಾನಮ್ಯಾಜಿಕ್ ತಾಣಗಳುವಿಂಗಡಿಸದ

ಡಿ.22 ರಿಂದ 6 ದಿನ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ . ಯಾಕೆ ಗೊತ್ತಾ..?

6 ದಿನಗಳ ಕಾಲ ಪಶ್ಚಿಮ ಘಟ್ಟಗಳ (western Ghats) ಸಾಲಿನ ಪ್ರವಾಸಿ ತಾಣಗಳು ನಿರ್ಬಂಧವಾಗಲಿದೆ. ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಾಧಾರಾ ಸೇರಿದಂತೆ ಎಲ್ಲ ಪ್ರವಾಸಿ ತಾಣಗಳನ್ನು ಬಂದ್ ಮಾಡಲಾಗುತ್ತಿದೆ. ಡಿಸೆಂಬರ್‌ 22 ರಿಂದ 27ರವರೆಗೆ 6 ದಿನಗಳ ಕಾಲ ಗಿರಿಭಾಗಕ್ಕೆ(Hills Station)ಟೂರಿಸ್ಟ್ (Tourist )ಬ್ಯಾನ್ ಮಾಡಲಾಗಿದೆ.

Chikmagalur

ಡಿಸೆಂಬರ್‌ 24, 25, 26ರಂದು ಕಾಫಿನಾಡು ಚಿಕ್ಕಮಗಳೂರಲ್ಲಿ(Chikmagalur )ದತ್ತಪೀಠದಲ್ಲಿ ದತ್ತ ಜಯಂತಿ(Dhatta Jayanti) ಆರಂಭ ಆಗಲಿದೆ. ಡಿ. 26ರಂದು 20 ಸಾವಿರಕ್ಕೂ ಅಧಿಕ ಮಾಲಾಧಾರಿಗಳು ದತ್ತಪೀಠಕ್ಕೆ ಆಗಮಿಸುತ್ತಾರೆ. ಐ.ಡಿ ಪೀಠಕ್ಕೆ ತೆರಳುವ ರಸ್ತೆಯು ಕಿರಿದಾಗಿದ್ದು, ವಾಹನಗಳ ದಟ್ಟಣೆಯಾಗುತ್ತದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತವು ಪ್ರವಾಸಕ್ಕೆ ನಿರ್ಬಂಧ ಹೇರಿದೆ. ಜತೆಗೆ ಗಿರಿ ಭಾಗದಲ್ಲಿ ಕ್ರಿಸ್ ಮಸ್ ಸೆಲೆಬ್ರೇಷನ್ ಮಾಡುವುದಕ್ಕೂ ಬ್ರೇಕ್ ಹಾಕಲಾಗಿದೆ. 6 ದಿನಗಳ ಕಾಲ ಚಂದ್ರದ್ರೋಣ ಪರ್ವತಗಳ ಸಾಲಿನ ಪ್ರವಾಸಿ ತಾಣಗಳಿಗೆ ಟೂರಿಸ್ಟ್ ವಿಸಿಟ್‌ ಬ್ಯಾನ್ (Entry Banned) ಮಾಡಲಾಗಿದೆ.

Hills station

ಇದನ್ನು ಇಷ್ಟ ಪಡಬಹುದು:ಚಿಕ್ಕಮಗಳೂರು ಜಿಲ್ಲೆಯ ಏಳು ಪ್ರಸಿದ್ಧ ತಾಣಗಳಿವು

ಡಿಸೆಂಬರ್ 22ರಿಂದ 27ರವರೆಗೆ ಪ್ರವಾಸಿ ತಾಣಗಳಿಗೆ ನಿರ್ಬಂಧ ಇರಲಿದೆ.ಡಿಸೆಂಬರ್ 26ಕ್ಕೆ 20 ಸಾವಿರಕ್ಕೂ ಅಧಿಕ ಮಾಲಾಧಾರಿಗಳು ದತ್ತಪೀಠಕ್ಕೆ ಆಗಮಿಸಲಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

Tourist place

ಡಿಸೆಂಬರ್ 23, 24 ವಾರಾಂತ್ಯ ಇದೆ. 25ರಂದು ಸೋಮವಾರ ಕ್ರಿಸ್ಮಸ್ ಪ್ರಯುಕ್ತ ಸಾರ್ವಜನಿಕ ರಜೆ ಇದೆ. ಹೀಗಾಗಿ ಈ ಸಂದರ್ಭದಲ್ಲಿ ಅನೇಕರು ಪ್ರವಾಸಕ್ಕೆ ಪ್ಲ್ಯಾನ್ ಮಾಡಿರುವ ಸಾಧ್ಯತೆ ಇದ್ದು, ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಯೋಚಿಸಿರುವ ಸಾಧ್ಯತೆಯೂ ಇದೆ. ಹೀಗಾಗಿ ಜಿಲ್ಲಾಡಳಿತ ಮುಂಚಿತವಾಗಿಯೇ ಮಾಹಿತಿ ನೀಡಿದೆ.

ನಾವೂ ಇನ್ ಸ್ಟಾಗ್ರಾಮ್ ನಲ್ಲೂ ಇದ್ದೀವಿ! ನಮ್ಮ ಗ್ರೂಪ್ ಜಾಯಿನ್ ಆಗಿ.

ನೀವು ಪ್ರವಾಸ ಹೋಗುವ ತಾಣದ ಮಾಹಿತಿ, ಕನ್ನಡ.ಟ್ರಾವೆಲ್ (Kannada.Travel) ಜಾಲತಾಣದಲ್ಲಿ ಪ್ರಕಟವಾಗುವ ಬರಹಗಳ ವಿವರ, ಅಪರೂಪದ ಟ್ರಾವೆಲರ್ ಗಳ ಪರಿಚಯ, ಪ್ರವಾಸಿ ತಾಣಗಳ ಕುತೂಹಲಕರ ಚಿತ್ರ ಬರಹ ಎಲ್ಲವೂ ಇಲ್ಲಿ ನಿಮಗೆ ಸಿಗುತ್ತದೆ. ಬನ್ನಿ ಜೊತೆಯಾಗಿ.

Related Articles

Leave a Reply

Your email address will not be published. Required fields are marked *

Back to top button