ಚೀನಾದಲ್ಲಿ ನಿಗೂಢ ನ್ಯುಮೋನಿಯಾ; ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದಲ್ಲಿ ಅಲರ್ಟ್
ಉತ್ತರ ಚೀನಾದಲ್ಲಿ ನಿಗೂಢ ನ್ಯುಮೋನಿಯಾ ಕಾಣಿಸಿಕೊಂಡ ಬೆನ್ನಲ್ಲೇ ಭಾರತ ಕೂಡ ತೀವ್ರ ಕಟ್ಟೆಚ್ಚರ ವಹಿಸುತ್ತಿದೆ. ಕೇಂದ್ರ ಆರೋಗ್ಯ ಸಚಿವಾಲಯವು ನವೆಂಬರ್ 26ರಂದು ಎಲ್ಲ ರಾಜ್ಯಗಳಿಗೆ ಸೂಚನೆ ನೀಡಿದ್ದು, ಆಸ್ಪತ್ರೆಗಳ ಸಿದ್ಧತೆ ಪರಿಶೀಲನೆ ಮಾಡುವಂತೆ ತಿಳಿಸಿದೆ.
● ನವ್ಯಶ್ರೀ ಶೆಟ್ಟಿ
ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೋವಿಡ್-19ರ ಸಂದರ್ಭದಲ್ಲಿ ಪರಿಷ್ಕೃತ ಕಣ್ಗಾವಲು ಕಾರ್ಯತಂತ್ರಕ್ಕಾಗಿ ಕಾರ್ಯಾಚರಣಾ ಮಾರ್ಗಸೂಚಿಗಳನ್ನು ಜಾರಿಗೊಳಿಸಲು ಸಲಹೆ ನೀಡಲಾಗಿದೆ ಕೇಂದ್ರ ಸಚಿವಾಲಯವು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ (WHO) ಕೂಡ ಚೀನಾದಿಂದ ವರದಿ ತರಿಸಿಕೊಂಡಿದೆ. ಕೇಂದ್ರ ಸರ್ಕಾರ ಕೂಡ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಕರ್ನಾಟಕ ಸೇರಿದಂತೆ ರಾಜಸ್ಥಾನ, ಗುಜರಾತ್, ಉತ್ತರಾಖಂಡ ಮತ್ತು ತಮಿಳುನಾಡಿನ ರಾಜ್ಯ ಸರ್ಕಾರಗಳು ಉಸಿರಾಟದ ಸಮಸ್ಯೆ ಕಂಡುಬಂದ ರೋಗಿಗಳನ್ನು ನಿಭಾಯಿಸಲು ಇಲಾಖೆಗೆ ಸೂಚನೆ ನೀಡಿದೆ.
ಕರ್ನಾಟಕ ಸರ್ಕಾರದಿಂದ ಅಲರ್ಟ್
ವೈರಸ್ ಬಗ್ಗೆ ನಾಗರಿಕರು ಜಾಗೃತರಾಗಿರಲು ಕರ್ನಾಟಕ ಆರೋಗ್ಯ ಇಲಾಖೆ ಕೇಳಿಕೊಂಡಿದೆ. ಕೆಮ್ಮುವಾಗ ಅಥವಾ ಸೀನುವಾಗ ಬಾಯಿ ಮತ್ತು ಮೂಗನ್ನು ಮುಚ್ಚಿಕೊಳ್ಳುವುದು, ಆಗಾಗ್ಗೆ ಕೈಗಳನ್ನು ತೊಳೆಯುವುದು, ಮುಖವನ್ನು ಸ್ಪರ್ಶಿಸುವುದನ್ನು ತಪ್ಪಿಸುವುದು ಮತ್ತು ಹೆಚ್ಚು ಜನರಿರುವ ಸ್ಥಳಗಳಲ್ಲಿ ಸೀನುವಾಗ ಮುಖವನ್ನು ಕರ್ಚೀಫ್ ಅಥವಾ ಮಾಸ್ಕ್ ನಿಂದ ಕವರ್ ಮಾಡಿಕೊಳ್ಳಲು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.
ಅಲ್ಲದೆ ನ್ಯೂಮೋನಿಯಾ ರೀತಿಯ ಲಕ್ಷಣಗಳು ಕಂಡು ಬಂದಲ್ಲಿ ನಿರ್ಲಕ್ಷಿಸಿ ಬೇಡ. ಹತ್ತಿರದ ಆಸ್ಪತ್ರೆಗಳು ಭೇಟಿ ನೀಡಿ ಎನ್ನುವ ಸಲಹೆಯನ್ನು ಆರೋಗ್ಯ ಇಲಾಖೆ ನೀಡಿ.
ನಿಗೂಢ ನ್ಯುಮೋನಿಯ ಲಕ್ಷಣಗಳು
ಸೋಂಕು ತಗುಲಿರುವ ಮಕ್ಕಳಲ್ಲಿ ವಿಪರೀತ ಜ್ವರ ಹಾಗೂ ಶ್ವಾಸಕೋಶದ ಉರಿಯೂತ ಪ್ರಮುಖ ಲಕ್ಷಣವಾಗಿದೆ. ಅದರ ಜೊತೆಗೆ ಹೆಚ್ಚಾಗಿ ಉಸಿರಾಟದ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ..
1)ಜ್ವರ, 2)ಶೀತ, ಅಸ್ವಸ್ಥತೆ, 3) ಹಸಿವಿನ ಕೊರತೆ, ಮೈಯಾಲ್ಜಿಯಾ 4) ವಾಕರಿಕೆ, ಸೀನುವಿಕೆ, 5 ) ಮೂರು ವಾರಗಳವರೆಗೆ ಒಣ ಕೆಮ್ಮು ಈ ರೋಗದ ಪ್ರಮುಖ ಲಕ್ಷಣಗಳು.
ಮುಂಜಾಗೃತಾ ಕ್ರಮಗಳೇನು..?
ಕೆಮ್ಮುವಾಗ ಅಥವಾ ಸೀನುವಾಗ ನಿಮ್ಮ ಬಾಯಿ ಮತ್ತು ಮೂಗನ್ನು ಕರವಸ್ತ್ರದಿಂದ ಮುಚ್ಚಿಕೊಳ್ಳುವುದು.
ಸಾಬೂನು ಮತ್ತು ನೀರಿನಿಂದ ನಿಮ್ಮ ಕೈಗಳನ್ನು ಆಗಾಗ್ಗೆ ತೊಳೆದುಕೊಳ್ಳುವುದು.
ಕಣ್ಣು, ಮೂಗು ಅಥವಾ ಬಾಯಿಯನ್ನು ಅನಗತ್ಯವಾಗಿ ಸ್ಪರ್ಶಿಸುವುದನ್ನು ತಪ್ಪಿಸುವುದು.
ಜನಸಂದಣಿ ಇರುವ ಸ್ಥಳಗಳಿಗೆ ಭೇಟಿ ನೀಡುವುದನ್ನು ತಪ್ಪಿಸಿ. ಅಂತಹ ಸ್ಥಳಗಳಿಗೆ ಭೇಟಿ ನೀಡಿದರೆ ಮಾಸ್ಕ್ ಬಳಸುವುದು.
ಫ್ಲೂ ಪೀಡಿತ ವ್ಯಕ್ತಿಗಳಿಂದ ಕನಿಷ್ಠ ಅಂತರವನ್ನು ಕಾಪಾಡಿಕೊಳ್ಳುವುದು,
ನಿದ್ರೆ ಮಾಡಿ, ದೈಹಿಕವಾಗಿ ಕ್ರಿಯಾಶೀಲರಾಗಿ ಮತ್ತು ಒತ್ತಡವನ್ನು ಪರಿಣಾಮಕಾರಿಯಾಗಿ ನಿಭಾಯಿಸಿ.
ನಾವೂ ಇನ್ ಸ್ಟಾಗ್ರಾಮ್ ನಲ್ಲೂ ಇದ್ದೀವಿ! ನಮ್ಮ ಗ್ರೂಪ್ ಜಾಯಿನ್ ಆಗಿ.
ನೀವು ಪ್ರವಾಸ ಹೋಗುವ ತಾಣದ ಮಾಹಿತಿ, ಕನ್ನಡ.ಟ್ರಾವೆಲ್ (Kannada.Travel) ಜಾಲತಾಣದಲ್ಲಿ ಪ್ರಕಟವಾಗುವ ಬರಹಗಳ ವಿವರ, ಅಪರೂಪದ ಟ್ರಾವೆಲರ್ ಗಳ ಪರಿಚಯ, ಪ್ರವಾಸಿ ತಾಣಗಳ ಕುತೂಹಲಕರ ಚಿತ್ರ ಬರಹ ಎಲ್ಲವೂ ಇಲ್ಲಿ ನಿಮಗೆ ಸಿಗುತ್ತದೆ. ಬನ್ನಿ ಜೊತೆಯಾಗಿ.