ಮ್ಯಾಜಿಕ್ ತಾಣಗಳುವಿಂಗಡಿಸದಸ್ಮರಣೀಯ ಜಾಗ

ಇಂದು ರಾಷ್ಟ್ರೀಯ ಪ್ರವಾಸೋದ್ಯಮ ದಿನ; ಈ ದಿನದ ಇತಿಹಾಸ ಮತ್ತು ಮಹತ್ವ

ಭಾರತ ವೈವಿಧ್ಯಮಯ ಸಾಂಸ್ಕೃತಿಕ ಪ್ರವಾಸಿ ತಾಣಗಳನ್ನು ಹೊಂದಿರುವ ದೇಶ. ದೇಶದ ಪ್ರತೀ ಗ್ರಾಮ, ನಗರಗಳೂ ವಿಭಿನ್ನ ಆಚಾರ-ವಿಚಾರ, ಸಂಪ್ರದಾಯ, ಆಹಾರ ಪದ್ಧತಿಯನ್ನು ಹೊಂದಿದೆ.

ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಇರುವ ಕಣ್ಮನ ಸೆಳೆಯುವ ಪ್ರವಾಸಿ ತಾಣಗಳೂ ದೇಶ-ವಿದೇಶಗಳಿಂದ ಪ್ರವಾಸಿಗರನ್ನು ತನ್ನತ್ತ ಕೈಬೀಸಿ ಕರೆಯುತ್ತವೆ. ನಮ್ಮ ದೇಶಕ್ಕೆ ಬಹುಮುಖ್ಯ ಆದಾಯ ಒದಗಿಸುವುದೂ ಈ ಪ್ರವಾಸೋದ್ಯಮವೇ.

ನಮ್ಮ ದೇಶದ ಪ್ರವಾಸೋದ್ಯಮವನ್ನು ಇನ್ನಷ್ಟು ಅಭಿವೃದ್ಧಿಗೊಳಿಸುವ ಹಾಗೂ ಉತ್ತೇಜಿಸುವ ನಿಟ್ಟಿನಿಂದ ರಾಷ್ಟ್ರೀಯ ಪ್ರವಾಸೋದ್ಯಮ ದಿನವನ್ನು ಆಚರಿಸಲಾಗುತ್ತದೆ.

ರಾಷ್ಟ್ರೀಯ ಪ್ರವಾಸೋದ್ಯಮ ದಿನದ ಇತಿಹಾಸ:

ರಾಷ್ಟ್ರೀಯ ಪ್ರವಾಸೋದ್ಯಮ ದಿನವನ್ನು (National Tourism Day) ಪ್ರತಿ ವರ್ಷ ಜನವರಿ 25 ರಂದು ಆಚರಿಸಲಾಗುತ್ತದೆ. ಭಾರತ ಸರ್ಕಾರ ಸ್ವಾತಂತ್ರ್ಯದ ಬಳಿಕ 1948ರಲ್ಲಿ ಮೊದಲ ಬಾರಿಗೆ ಭಾರತದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಪ್ರವಾಸೋದ್ಯಮ ಸಾರಿಗೆ ಸಮಿತಿಯನ್ನು ರಚಿಸಿ, “ರಾಷ್ಟ್ರೀಯ ಪ್ರವಾಸೋದ್ಯಮ ದಿನ”ವನ್ನು ಆಚರಿಸಲು ಪ್ರಾರಂಭಿಸಿತು.

ನಂತರ 1998 ರಲ್ಲಿ ಪ್ರವಾಸೋದ್ಯಮ ಮತ್ತು ಸಂಪರ್ಕ ಸಚಿವಾಲಯದ ಅಡಿಯಲ್ಲಿ “ಪ್ರವಾಸೋದ್ಯಮ ಇಲಾಖೆ”ಯು ಆರಂಭಗೊಂಡಿತು.

ರಾಷ್ಟ್ರೀಯ ಪ್ರವಾಸೋದ್ಯಮ ದಿನ 2024ರ ಥೀಮ್:

ಪ್ರತೀ ವರ್ಷ ಪ್ರವಾಸೋದ್ಯಮ ದಿನವನ್ನು ನಿರ್ದಿಷ್ಟ ಉದ್ದೇಶ ಅಥವಾ ಥೀಮ್ ನೊಂದಿಗೆ ಆಚರಿಸಲಾಗುತ್ತದೆ. 2023ರಲ್ಲಿ ‘ಪ್ರವಾಸೋದ್ಯಮ ಮತ್ತು ಹಸಿರು ಹೂಡಿಕೆಗಳು’ ಎಂಬ ಥೀಮ್ ನೊಂದಿಗೆ ಪ್ರವಾಸೋದ್ಯಮ ದಿನವನ್ನು ಆಚರಿಸಲಾಗಿತ್ತು.

ಅಂತೆಯೇ ಈ ವರ್ಷ ‘ಸುಸ್ಥಿರ ಪ್ರಯಾಣಗಳು, ಸಾಕಷ್ಟು ನೆನಪುಗಳು’ ಎಂಬ ಥೀಮ್ (Theme) ನೊಂದಿಗೆ ಪ್ರವಾಸೋದ್ಯಮ ದಿನವನ್ನು ಆಚರಿಸಲಾಗುತ್ತಿದೆ.

ರಾಷ್ಟ್ರೀಯ ಪ್ರವಾಸೋದ್ಯಮ ದಿನದ ಮಹತ್ವ: 1.ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಆರ್ಥಿಕ ಬೆಳವಣಿಗೆ ಮತ್ತು ಉದ್ಯೋಗವನ್ನು ಸೃಷ್ಟಿಸುವಲ್ಲಿ “ಪ್ರವಾಸೋದ್ಯಮ” ವಹಿಸುವ ಪಾತ್ರದ ಕುರಿತು ಜಾಗೃತಿ ಮೂಡಿಸುವುದು.

2.ದೇಶದ ಮೇಲೆ ಪ್ರವಾಸೋದ್ಯಮದ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರಭಾವದ ಬಗ್ಗೆ ಸಾರ್ವಜನಿಕ ತಿಳುವಳಿಕೆಯನ್ನು ಮೂಡಿಸುವುದು.

ಈ ದಿನದಂದು ದೇಶದ ವಿವಿಧ ಭಾಗಗಳಲ್ಲಿ ವಿಚಾರಗೋಷ್ಠಿಗಳು, ಕಾರ್ಯಾಗಾರಗಳು ಮತ್ತು ಪ್ರವಾಸೋದ್ಯಮ ಸಂಬಂಧಿತ ಪ್ರಚಾರಗಳನ್ನು ಪ್ರವಾಸೋದ್ಯಮ ಇಲಾಖೆಯಿಂದ ಆಯೋಜಿಸಲಾಗುತ್ತದೆ.

ನಾವೂ ಇನ್ ಸ್ಟಾಗ್ರಾಮ್ ನಲ್ಲೂ ಇದ್ದೀವಿ! ನಮ್ಮ ಗ್ರೂಪ್ ಜಾಯಿನ್ ಆಗಿ.

ನೀವು ಪ್ರವಾಸ ಹೋಗುವ ತಾಣದ ಮಾಹಿತಿ, ಕನ್ನಡ.ಟ್ರಾವೆಲ್ (Kannada.Travel) ಜಾಲತಾಣದಲ್ಲಿ ಪ್ರಕಟವಾಗುವ ಬರಹಗಳ ವಿವರ, ಅಪರೂಪದ ಟ್ರಾವೆಲರ್ ಗಳ ಪರಿಚಯ, ಪ್ರವಾಸಿ ತಾಣಗಳ ಕುತೂಹಲಕರ ಚಿತ್ರ ಬರಹ ಎಲ್ಲವೂ ಇಲ್ಲಿ ನಿಮಗೆ ಸಿಗುತ್ತದೆ. ಬನ್ನಿ ಜೊತೆಯಾಗಿ.

Related Articles

Leave a Reply

Your email address will not be published. Required fields are marked *

Back to top button