ವಿಂಗಡಿಸದ

ರಾಮ ಮಂದಿರ ಉದ್ಘಾಟನೆಗೆ ಹೋಗುವವರಿಗೆ ಸಿಹಿ ಸುದ್ದಿ

ರಾಮ ಮಂದಿರ ಉದ್ಘಾಟನೆಗಾಗಿ ಅಯೋಧ್ಯೆಗೆ ಭೇಟಿ ನೀಡಲು ಬಯಸುವ ಭಕ್ತರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ.

ಜನವರಿ 22 ರಂದು ಬಹು ನಿರೀಕ್ಷಿತ ಮಹಾಮಸ್ತಕಾಭಿಷೇಕ ನಡೆಯುತ್ತಿದ್ದು, ಭಾರತೀಯ ರೈಲ್ವೇ ಭಕ್ತರಿಗೆ ಗುಡ್‌ ನ್ಯೂಸ್‌ ನೀಡಲಿದೆ.

ಹಿಂದೂ ಭಕ್ತರಿಗೆ ತೀರ್ಥಯಾತ್ರೆಗೆ ಅನುಕೂಲವಾಗುವಂತೆ ದೇಶದ ವಿವಿಧ ಭಾಗಗಳಿಂದ 1,000 ವಿಶೇಷ ರೈಲು (Special Trains) ಗಳನ್ನು ಓಡಿಸಲು ಯೋಜಿಸಲಾಗಿದೆ.

ಸಾರಿಗೆ ವ್ಯವಸ್ಥೆಗಳ ಜೊತೆಗೆ, ಭಾರತೀಯ ರೈಲ್ವೆಯ ಅಡುಗೆ ಮತ್ತು ಟಿಕೆಟ್ ವಿಭಾಗವು (IRCTC) ಉದ್ಘಾಟನೆಯ 10-15 ದಿನಗಳಲ್ಲಿ ಸೇವೆಗಳನ್ನು ಒದಗಿಸಲು ಹಗಲಿರುಳು ಶ್ರಮಿಸಲು ಸಜ್ಜಾಗಿದೆ.

ರಾಮಮಂದಿರ (Ram Mandir) ಉದ್ಘಾಟನೆಯ ಸಮಯದಲ್ಲಿ ಮತ್ತು ನಂತರ ಭಕ್ತರ ಬೇಡಿಕೆಗಳನ್ನು ಪೂರೈಸಲು ಅಧಿಕಾರಿಗಳು ಹಲವಾರು ಆಹಾರ ಮಳಿಗೆಗಳನ್ನು ಸ್ಥಾಪಿಸಲು ಯೋಜನೆಯನ್ನು ರೂಪಿಸುತ್ತಿದ್ದಾರಂತೆ.

Railways planning to run over 1,000 special trains to Ayodhya

ಪುನರಾಭಿವೃದ್ಧಿಗೊಂಡ ಅಯೋಧ್ಯೆ ರೈಲು ನಿಲ್ದಾಣವು (Ayodhya Railway Station) ಪ್ರತಿದಿನ ಅಂದಾಜು 50,000 ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯವನ್ನು ಹೊಂದಿದೆ, ಇದು ಜನವರಿ 15ರ ವೇಳೆಗೆ ಸಂಪೂರ್ಣವಾಗಿ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ.

ಈ ರೈಲುಗಳ ಕಾರ್ಯಾಚರಣೆಯು ಜನವರಿ 19 ರಂದು ಪ್ರಾರಂಭವಾಗಲಿದ್ದು, ಭವ್ಯ ಮಂದಿರ ಉದ್ಘಾಟನೆಯ ಮೊದಲ 100 ದಿನಗಳಲ್ಲಿ, ಪವಿತ್ರ ನಗರಕ್ಕೆ ಭೇಟಿ ನೀಡಲು ಭಕ್ತರಿಗೆ ಸಾಕಷ್ಟು ಸಾರಿಗೆ ಅವಕಾಶಗಳನ್ನು ಇದು ಒದಗಿಸಿಕೊಡಲಿದೆ.

ಎಲ್ಲಿಗೆ ವಿಶೇಷ ರೈಲುಗಳು..?

ವಿಶೇಷ ರೈಲುಗಳು ಬೆಂಗಳೂರು, ದೆಹಲಿ, ಮುಂಬೈ, ಚೆನ್ನೈ, ಪುಣೆ, ಕೋಲ್ಕತ್ತಾ, ನಾಗ್ಪುರ, ಲಖನೌ ಮತ್ತು ಜಮ್ಮು ಸೇರಿದಂತೆ ಪ್ರಮುಖ ನಗರಗಳನ್ನು ಅಯೋಧ್ಯೆಗೆ ಸಂಪರ್ಕಿಸಲಿವೆ.

“ಈ ಉದ್ದೇಶಿತ ರೈಲುಗಳ ಸಂಖ್ಯೆಯನ್ನು ಬೇಡಿಕೆಯನ್ನು ಪರಿಗಣಿಸಿ ನಿಯೋಜಿಸಬಹುದು. ಹೆಚ್ಚಿನ ಸಂಖ್ಯೆಯ ರೈಲುಗಳ ನಿಲುಗಡೆಗೆ ಅವಕಾಶ ಕಲ್ಪಿಸಲು ಅಯೋಧ್ಯೆಯಲ್ಲಿ ನಿಲ್ದಾಣವನ್ನು ನವೀಕರಿಸಲಾಗಿದೆ” ಎಂದು ಮೂಲಗಳು ತಿಳಿಸಿವೆ.

ಜನವರಿ 22ರಂದು ಭಗವಾನ್ ಶ್ರೀರಾಮನ ವಿಗ್ರಹದ ಪ್ರತಿಷ್ಠಾಪನೆಯ ನಂತರ, ಜನವರಿ 23 ರಿಂದ ದೇವಾಲಯವು ಸಾರ್ವಜನಿಕರಿಗೆ ತೆರೆದಿರುತ್ತದೆ.

1,800 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಭವ್ಯವಾದ ದೇವಾಲಯದ ನೆಲಮಹಡಿಯು ವರ್ಷಾಂತ್ಯದೊಳಗೆ ಪೂರ್ಣಗೊಳ್ಳಲಿದೆ.

ನಾವೂ ಇನ್ ಸ್ಟಾಗ್ರಾಮ್ ನಲ್ಲೂ ಇದ್ದೀವಿ! ನಮ್ಮ ಗ್ರೂಪ್ ಜಾಯಿನ್ ಆಗಿ.

ನೀವು ಪ್ರವಾಸ ಹೋಗುವ ತಾಣದ ಮಾಹಿತಿ, ಕನ್ನಡ.ಟ್ರಾವೆಲ್ (Kannada.Travel) ಜಾಲತಾಣದಲ್ಲಿ ಪ್ರಕಟವಾಗುವ ಬರಹಗಳ ವಿವರ, ಅಪರೂಪದ ಟ್ರಾವೆಲರ್ ಗಳ ಪರಿಚಯ, ಪ್ರವಾಸಿ ತಾಣಗಳ ಕುತೂಹಲಕರ ಚಿತ್ರ ಬರಹ ಎಲ್ಲವೂ ಇಲ್ಲಿ ನಿಮಗೆ ಸಿಗುತ್ತದೆ. ಬನ್ನಿ ಜೊತೆಯಾಗಿ.

Related Articles

Leave a Reply

Your email address will not be published. Required fields are marked *

Back to top button