ದೂರ ತೀರ ಯಾನವಂಡರ್ ಬಾಕ್ಸ್ವಿಂಗಡಿಸದ

ವಿಶ್ವಕಪ್‌ನಲ್ಲಿ ಸ್ಕಾಟ್ಲೆಂಡ್, ಐರ್ಲೆಂಡ್ ತಂಡಗಳಿಗೆ ‘ನಂದಿನಿ’ ಪ್ರಾಯೋಜಕತ್ವ

ಟಿ20 ಕ್ರಿಕೆಟ್‌ ವಿಶ್ವಕಪ್‌ಗಾಗಿ (T20 World Cup 2024) ತನಗೆ ಪ್ರಾಯೋಜಕತ್ವ ನೀಡಿರುವ ಕರ್ನಾಟಕ ಹಾಲು ಒಕ್ಕೂಟದ ‘ನಂದಿನಿ’ (Nandini Brand) ಬ್ರ್ಯಾಂಡ್‌ ಲೋಗೋ ಇರುವ ಜೆರ್ಸಿಯನ್ನು ಸ್ಕಾಟ್ಲೆಂಡ್‌ (Scotland) ತಂಡ ಅನಾವರಣಗೊಳಿಸಿದೆ.

ನಂದಿನಿ ಬ್ರಾಂಡ್‌ನಲ್ಲಿ (Nandini Milk) ತನ್ನ ಡೈರಿ ಉತ್ಪನ್ನಗಳನ್ನು ಮಾರಾಟ ಮಾಡುವ ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ (KMF), ಟಿ20 ಕ್ರಿಕೆಟ್ ವಿಶ್ವಕಪ್‌ಗಾಗಿ (T20 World Cup 2024) ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳಿಗೆ ಪ್ರಾಯೋಜಕತ್ವ ನೀಡಿದೆ. ಪ್ರತಿ ತಂಡಕ್ಕೆ ಪ್ರಾಯೋಜಕತ್ವದ ಮೊತ್ತ ಸುಮಾರು 2.5 ಕೋಟಿ ಎಂದು ಕೆಎಂಎಫ್ ಮೂಲಗಳು ತಿಳಿಸಿವೆ.

Scotland

 ಟಿ20 ಕ್ರಿಕೆಟ್‌ ವಿಶ್ವಕಪ್‌ಗಾಗಿ (T20 World Cup 2024) ತನಗೆ ಪ್ರಾಯೋಜಕತ್ವ ನೀಡಿರುವ ಕರ್ನಾಟಕ ಹಾಲು ಒಕ್ಕೂಟದ ‘ನಂದಿನಿ’ (Nandini Brand) ಬ್ರ್ಯಾಂಡ್‌ ಲೋಗೋ ಇರುವ ಜೆರ್ಸಿಯನ್ನು ಸ್ಕಾಟ್ಲೆಂಡ್‌ (Scotland) ತಂಡ ಅನಾವರಣಗೊಳಿಸಿದೆ.

ವೆಸ್ಟ್ ಇಂಡೀಸ್ ಮತ್ತು USA ನಲ್ಲಿ ನಡೆಯುವ ಪಂದ್ಯಾವಳಿ ಜೂ.2 ರಿಂದ ಆರಂಭವಾಗಲಿದೆ. ಸ್ಕಾಟ್ಲೆಂಡ್ ಪುರುಷರ ಪ್ಲೇಯಿಂಗ್ ಶರ್ಟ್‌ಗಳ ಎಡ ತೋಳಿನ ಮೇಲೆ ನಂದಿನಿ ಲೋಗೋ ಇರುತ್ತದೆ. ಲೋಗೋದಲ್ಲಿ ‘ನಂದಿನಿ’ ಎಂದು ಕನ್ನಡ ಮತ್ತು ಇಂಗ್ಲಿಷ್ ಎರಡರಲ್ಲೂ ಬರೆಯಲಾಗಿದೆ. 

Nandini

ನಂದಿನಿ ಬ್ರಾಂಡ್‌ನಲ್ಲಿ (Nandini Milk) ತನ್ನ ಡೈರಿ ಉತ್ಪನ್ನಗಳನ್ನು ಮಾರಾಟ ಮಾಡುವ ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ (KMF), ಟಿ20 ಕ್ರಿಕೆಟ್ ವಿಶ್ವಕಪ್‌ಗಾಗಿ (T20 World Cup 2024) ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳಿಗೆ ಪ್ರಾಯೋಜಕತ್ವ ನೀಡಿದೆ. ಪ್ರತಿ ತಂಡಕ್ಕೆ ಪ್ರಾಯೋಜಕತ್ವದ ಮೊತ್ತ ಸುಮಾರು 2.5 ಕೋಟಿ ಎಂದು ಕೆಎಂಎಫ್ ಮೂಲಗಳು ತಿಳಿಸಿವೆ.

ನೀವು ಇದನ್ನು ಓದಬಹುದು :12 ದೇಶಗಳಿಗೆ ವೀಸಾ ಮುಕ್ತ ಪ್ರವೇಶದ ಅವಧಿ ವಿಸ್ತರಿಸಿದ ಚೀನಾ

ರಾಜ್ಯದ ಕೆಎಂಎಫ್‌ ನಂದಿನಿ ವಿಶ್ವಕಪ್‌ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಬಗ್ಗೆ ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ವಿಶ್ವಕ್ಕೆ ರಾಜ್ಯದ ರೈತರ ಶ್ರಮ ಪರಿಚಯವಾಗುತ್ತಿದೆ ಎಂದಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿದ ಸಿಎಂ ಸಿದ್ದರಾಮಯ್ಯ,( “ಮಲೇಷಿಯಾ, ವಿಯೆಟ್ನಾಂ, ಸಿಂಗಾಪುರ, ಅಮೇರಿಕಾ, ದುಬೈ, ಯುಎಇ ಮುಂತಾದ ರಾಷ್ಟ್ರಗಳಲ್ಲಿ ಹೆಸರುವಾಸಿಯಾಗಿರುವ ಕರ್ನಾಟಕದ ಹೆಮ್ಮೆಯ ನಂದಿನಿ ಸಂಸ್ಥೆ ಈಗ ಟಿ 20 ವಿಶ್ವಕಪ್ ಪಂದ್ಯಕೂಟದಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿದೆ ” ಎಂದಿದ್ದಾರೆ.

ಜೂನ್‌ 1 ರಿಂದ 18ರ ವರೆಗೆ ಗುಂಪು ಹಂತದ ಪಂದ್ಯಗಳು ನಡೆಯಲಿದೆ. ಜೂನ್‌ 19 ರಿಂದ 24ರ ವರೆಗೆ ಸೂಪರ್‌-8 ಪಂದ್ಯಗಳು, ಜೂನ್‌ 26 ಮತ್ತು ಜೂನ್‌ 27 ರಂದು ಸೆಮಿಫೈನಲ್‌ ಪಂದ್ಯಗಳು ನಡಯೆಲಿದ್ದು, ಜೂನ್‌ 29ರಂದು ಬಾರ್ಬಡೋಸ್ ಮೈದಾನದಲ್ಲಿ ಫೈನಲ್‌ ಪಂದ್ಯ ನಡೆಯಲಿದೆ.

Nandini Sponser
Cricket Scotland.

ಗುಂಪು ಹಂತದಲ್ಲಿ ಭಾರತ ಎದುರಿಸುವ 4 ಪಂದ್ಯಗಳ ಪೈಕಿ ಮೂರು ಪಂದ್ಯಗಳು ನ್ಯೂಯಾರ್ಕ್‌ ನಗರದಲ್ಲಿ, ಒಂದು ಪಂದ್ಯ ಫ್ಲೋರಿಡಾ ನಗರದಲ್ಲಿ ನಡೆಯಲಿದೆ. ಗುಂಪು ಹಂತದಲ್ಲಿ ಜೂನ್‌ 5 ರಂದು ಐರ್ಲೆಂಡ್‌ ವಿರುದ್ಧ, ಜೂನ್‌ 12 ರಂದು ಯುಎಸ್‌ಎ ವಿರುದ್ಧ, ಜೂನ್‌ 15 ರಂದು ಕೆನಡಾ ವಿರುದ್ಧ ಭಾರತ ತಂಡ ಸೆಣಸಲಿದೆ. ಇನ್ನೂ ಬಹು ನಿರೀಕ್ಷಿತ ಹೈವೋಲ್ಟೇಜ್‌ ಕದನದಲ್ಲಿ ಜೂನ್‌ 9 ರಂದು ಪಾಕಿಸ್ತಾನ ವಿರುದ್ಧ ನ್ಯೂಯಾರ್ಕ್‌ನ ಅಂಗಳದಲ್ಲಿ ಭಾರತ ಸೆಣಸಲಿದೆ,

ನಾವೂ ಇನ್ ಸ್ಟಾಗ್ರಾಮ್ ನಲ್ಲೂ ಇದ್ದೀವಿ! ನಮ್ಮ ಗ್ರೂಪ್ ಜಾಯಿನ್ ಆಗಿ.

ನೀವು ಪ್ರವಾಸ ಹೋಗುವ ತಾಣದ ಮಾಹಿತಿ, ಕನ್ನಡ.ಟ್ರಾವೆಲ್ (Kannada.Travel) ಜಾಲತಾಣದಲ್ಲಿ ಪ್ರಕಟವಾಗುವ ಬರಹಗಳ ವಿವರ, ಅಪರೂಪದ ಟ್ರಾವೆಲರ್ ಗಳ ಪರಿಚಯ, ಪ್ರವಾಸಿ ತಾಣಗಳ ಕುತೂಹಲಕರ ಚಿತ್ರ ಬರಹ ಎಲ್ಲವೂ ಇಲ್ಲಿ ನಿಮಗೆ ಸಿಗುತ್ತದೆ. ಬನ್ನಿ ಜೊತೆಯಾಗಿ.

Related Articles

Leave a Reply

Your email address will not be published. Required fields are marked *

Back to top button