ವಿಂಗಡಿಸದಸಂಸ್ಕೃತಿ, ಪರಂಪರೆ

ಕರ್ನಾಟಕದ ವಿವಿಧ ಜಾನಪದ ನೃತ್ಯ ಪ್ರಕಾರಗಳಿವು

ಜನಪದ ನೃತ್ಯ(Folk Dance) ಮತ್ತು ಗೀತೆಗಳು (Folk Song)ಒಂದು ರಾಜ್ಯದ ಜನರ ಜೀವಂತಿಕೆಯ ಸಂಕೇತ.

ಅದು ಅಲ್ಲಿನ ಜನರ ಬದುಕಿನ ಶೈಲಿಗೆ ದ್ಯೋತಕ. ಒಬ್ಬರ ಬಾಯಿಯಿಂದ ಮತ್ತೊಬ್ಬರ ಬಾಯಿಗೆ ಹರಿದಾಡುತ್ತಾ ಹುಟ್ಟಿಕೊಂಡಿದ್ದೇ ಈ ಅದ್ಭುತ ಸಂಸ್ಕೃತಿ.

ರಾಜ್ಯದ ಸಂಸ್ಕೃತಿ ಬಿಂಬಿಸುತ್ತದೆ. ನಮ್ಮ ರಾಜ್ಯದಲ್ಲಿ ಅಂತಹ ಹಲವು ನೃತ್ಯ ಪ್ರಕಾರಗಳನ್ನು ನಾವು ನೋಡಬಹುದು. ನಿಮಗೆ ಅವಕಾಶ ಸಿಕ್ಕರೆ ಕರ್ನಾಟಕದ (Karnataka)ಈ ಜನಪದ ನೃತ್ಯಗಳನ್ನು ನೋಡುವುದನ್ನು ಮಿಸ್ ಮಾಡಬೇಡಿ.

ಕರ್ನಾಟಕದ ವಿವಿಧ ಜಾನಪದ ನೃತ್ಯ ಪ್ರಕಾರಗಳಿವು

ಕರಗ ಕುಣಿತ (Karaga)

ಕರಗದ ಕುಣಿತದಲ್ಲಿ ಅಲಂಕೃತ ಕರಗವನ್ನು ತಲೆಯ ಮೇಲೆ ಧರಿಸಿ, ಭಕ್ತಿಪರವಶನಾದ ನೃತ್ಯಗಾರ ವಿವಿಧ ನರ್ತಿಸುತ್ತಾನೆ. ವಾದ್ಯಗೋಷ್ಠಿಯ ನಾದಕ್ಕೆ ಸ್ಫೂರ್ತಿಗೊಂಡು ದಿಗ್ಭ್ರಾಂತನಂತೆ ಕುಣಿದರೂ ಆತನ ತಲೆಯ ಮೇಲಿನ ಕರಗ ಒಂದಿಷ್ಟೂ ಅಲುಗಾಡುವುದಿಲ್ಲ.

Folk art forms of Karnataka

ಖಡ್ಗ ಹಿಡಿದು ಅವನನ್ನು ಹಿಂಬಾಲಿಸುವ ಪಂಗಡ ಆ ದೃಶ್ಯಕ್ಕೆ ಕಳೆ ಕೊಡುತ್ತದೆ. ಜಡೆ ಮತ್ತು ಚಿತ್ರಗೋಪುರ ಎಂಬವು ಕರಗದ(Karaga) ಇತರ ವಿಧಗಳು(Types).

ಲಂಬಾಣಿ ನೃತ್ಯ (Lambani Dance)

ಗುಡ್ಡಬೆಟ್ಟಗಳಲ್ಲಿ ವಾಸಿಸುವ ಲಂಬಾಣಿಯರ (Lambani)ಜನಪದ ನೃತ್ಯಗಳು ರಮಣೀಯವಾಗಿವೆ. ಕಸೂತಿ, ಮಣಿ, ಕನ್ನಡಿಗಳಿಂದ ಹೊಲೆದಿರುವ ಬಣ್ಣದ ಲಂಗ, ಕುಪ್ಪಸಗಳನ್ನು ತೊಟ್ಟುಕೊಂಡು.

Lambani Dance

ಕಾಲುಬೆರಳುಗಳಿಂದ ತಲೆಯ ಕೂದಲಿನವರೆಗೂ ಆಭರಣಗಳನ್ನು ಧರಿಸಿ, ಕೈಗಳನ್ನು ಜೋತುಹಾಕಿ ಸಾಮೂಹಿಕವಾಗಿ ಕುಣಿಯುವಾಗ ಈ ನೃತ್ಯ ಚಲನೆ ಒಂದು ಸಮುದಾಯದ ಸಂಸ್ಕೃತಿಯನ್ನು ಬಿಂಬಿಸುತ್ತದೆ..

ಕೋಲಾಟ (Kolata)

ಕರ್ನಾಟಕದ (Karnataka) ಕೋಲಾಟಗಳು ಆಕರ್ಷಣೀಯ. ಅವುಗಳಲ್ಲಿ ವೀರರಸ ಹೆಚ್ಚು. ಸೊಗಸಾದ ಗೀತೆಗಳನ್ನು ಹಾಡುತ್ತ ನರ್ತಕರು ಕೋಲು ಹಿಡಿದು ಚಕ್ರಾಕಾರವಾಗಿ ನಿಂತು ಹಾಡಿಗೆ ಸರಿಯಾಗಿ ಗೆಜ್ಜೆಕಾಲಿನ ಹೆಜ್ಜೆಗಳನ್ನು ಹಾಕುತ್ತ, ಕೋಲು ಹೊಯ್ಯುತ್ತ ಕುಣಿಯುತ್ತಾರೆ. ನೃತ್ಯ ಸಾಗಿದಂತೆ ಪದ್ಮ, ಚಕ್ರ, ಕೋಟೆ, ಜಡೆ ಮುಂತಾದ ಆಕೃತಿಗಳಲ್ಲಿ ನರ್ತಿಸುತ್ತಾರೆ.

Kolata

ರೈತರು ಸುಗ್ಗಿಯ ದಿನಗಳ ರಾತ್ರಿ ಬೆಳದಿಂಗಳಲ್ಲಿ ಕೋಲುಗಳನ್ನು ಕುಟ್ಟುತ್ತ ಪದವನ್ನು ಹಾಡುತ್ತ ಗುಂಪುಗುಂಪಾಗಿ ಕೋಲಾಟವಾಡುತ್ತಾರೆ(Group Dance).

ಈ ಪದ್ಯಗಳ ಸಾಹಿತ್ಯ ಬಹಳ ಸೊಗಸು. ಈ ಪದಗಳಲ್ಲಿ ಉತ್ಸಾಹ ಆನಂದ ರಸಗಳೇ ಪ್ರಧಾನ. ಗಂಡಸರೇ ಹೆಚ್ಚಾಗಿ ನಡೆಸುವ ಈ ಕೋಲಾಟಗಳನ್ನು ಕೆಲವೆಡೆ ಹೆಂಗಸರೂ ಆಡುತ್ತಾರೆ.

ಕೋಲಾಟಗಳಲ್ಲಿ- ಒಂಟಿಕೋಲು, ಜೋಡಿಕೋಲು, ತೊಟ್ಟಿಲುಕೋಲು, ಸುತ್ತುಕೋಲು ಇತ್ಯಾದಿ ವಿಧಗಳಿವೆ.

ಸುಗ್ಗಿಯ ಕುಣಿತ (Suggi Kunitha)

ಸುಗ್ಗಿಯ ಕುಣಿತ ಅನೇಕ ಕಡೆಗಳಲ್ಲಿ ಪ್ರಚಾರದಲ್ಲಿದೆ. ಅದರಲ್ಲಿ ರಂಗದ ಕುಣಿತ, ಮಾರಿ ಕುಣಿತ(Maari Kunita) ಎಂಬ ವಿಧಾನಗಳಿವೆ. ಸುಗ್ಗಿಯ ಸಂತೋಷ ಹಾಡು, ಕುಣಿತಗಳಲ್ಲಿ ರೈತನ ಸಂತೋಷ ಹೊರಹೊಮ್ಮುತ್ತದೆ.

Folk art forms of Karnataka

ಒಂದು ತಮಟೆಯ(Tamate )ತಾಳಕ್ಕೆ ನಾಲ್ಕಾರು ಜನ ಸಾಲಾಗಿ ನಿಂತು ಹೆಜ್ಜೆಹಾಕಲು ಆರಂಭಿಸುತ್ತಾರೆ. ಒಂದು ಕೈಯಲ್ಲಿ ಬಣ್ಣದ ಚೌಕ ಹಿಡಿದು ಇನ್ನೊಂದು ಕೈಯನ್ನು ಸೊಂಟದ ಮೇಲಿಟ್ಟು ಬಳುಕುತ್ತ, ಕುಪ್ಪಳಿಸುತ್ತ ಕುಣಿಯುತ್ತಾರೆ.

ನೀವು ಇದನ್ನು ಓದಬಹುದು:ದೋಸೆ ಪ್ರಿಯರ ಅಚ್ಚು ಮೆಚ್ಚಿನ ಜನಪ್ರಿಯ ದೋಸೆಗಳಿವು

ವೀರಭದ್ರ ಕುಣಿತ (Veerabhadra Kunitha)

ವೀರಭದ್ರ ಕುಣಿತ, ವೀರಮಕ್ಕಳ ಕುಣಿತಗಳು ಹೆಚ್ಚು ಮೈಸೀರಿನಲ್ಲಿವೆ.

Folk art forms of Karnataka

ವೀರಕುಣಿತ(Veera Kunita)ವೀರರಿಗೆ ಸಾಧ್ಯ. ಕಾಳಗಕ್ಕೆ ಮುಂಚೆಯೋ ಬೇಟೆಯ ಕೊನೆಯಲ್ಲೋ ಹುಮ್ಮಸ್ಸು ಹುರುಪುಗಳನ್ನು ಹೊರ ಸೂಸುವ ಈ ವೀರಕುಣಿತ ಆವೇಶಭರಿತವಾದುದು. ಕುಣಿವಾಗಿನ ಈ ವೀರರ ಕೇಕೆ ಹಲವಾರು ದೂರದವರೆಗೆ ಕೇಳುತ್ತಿರುತ್ತದೆ.

ಕಂಸಾಳೆ (Kamsale)

ಕಂಸಾಳೆ ಕುಣಿತದಲ್ಲಿ ಒಂದು ಕಂಚಿನ ಬಟ್ಟಲು ಮತ್ತು ತಾಳಗಳನ್ನು ಉಪಯೋಗಿಸುತ್ತಾರೆ.

Folk art forms of Karnataka

ಲಾವಣಿ (Lavani)ರೂಪದ ಹಾಡು. ನೃತ್ಯಗಾರರ ಜೊತೆಗೆ ಇಬ್ಬರು ಕಂಸಾಳೆ ಬಾರಿಸುತ್ತ ಪಲ್ಲವಿ ಹಾಡುತ್ತಾರೆ. ಒಬ್ಬ ಕಂಸಾಳೆಯನ್ನು ಬಡಿಯುತ್ತ ಬಾಗಿ ಬಳುಕಿ ಕುಣಿಯುತ್ತಾನೆ.

ಡೊಳ್ಳು ಕುಣಿತ (Dollu Kunitha)

ಪುರುಷರಿಗೆ ಮಿಸಲಾದ ಕಲೆ. ಉತ್ತರ ಕರ್ನಾಟಕದ (North Karnataka)ಬಹುಪಾಲು ಜಿಲ್ಲೆಗಳು ಹಾಗೂ ಚಿತ್ರದುರ್ಗ(Chitradurga)ಮತ್ತು ಶಿವಮೊಗ್ಗ (Shivamogga)ಜಿಲ್ಲೆಗಳಲ್ಲಿ ಪ್ರಚಲಿತವಿರುವ ಡೊಳ್ಳೂ ಕುಣಿತ ತನ್ನ ವಿಶಿಷ್ಟವಾದ ನೃತ್ಯ ಶೈಲಿಗಳಿಂದ ಉಳಿದುಕೊಂಡು ಬಂದಿದೆ.

Folk art forms of Karnataka

ಡೊಳ್ಳು ಬಾರಿಸಿಕೊಂಡು ಕುಣಿಯುವುದರಿಂದ ಇದಕ್ಕೆ ಡೊಳ್ಳು ಕುಣಿತ ಎಂಬ ಹೆಸರು.ಮೂಲತಃ ಕುರುಬ(Kuruba) ಜನಾಂಗದ ವಾದ್ಯವಾಗಿರುವ ಡೊಳ್ಳು ಹಳ್ಳಿಯ ಸಂಸ್ಕೃತಿ ಜೀವನದೊಂದಿಗೆ ಸಮರಸವಾಗಿ ಬೆರೆತುಕೊಂಡಿದೆ.

ನಂದಿಕಂಬದ ಕುಣಿತ (Nandikolu Kunitha)

ಮೆರವಣಿಗೆಗಳಲ್ಲಿ ಕಾಣಬಹುದು. ಯಾವುದಾದರೂ ವಿಜೃಂಭಣೆಯ ಮೆರವಣಿಗೆ ಹೊರಟಾಗ ಅಲಂಕೃತವಾದ 30-40 ಅಡಿ ಎತ್ತರದ ಕಂಬವನ್ನು ನೃತ್ಯಕಾರರು ಹೊಟ್ಟೆಗೆ ಜೋತುಹಾಕಿಕೊಂಡು ತಮ್ಮಟೆಯ(Tamate) ತಾಳಕ್ಕೆ ಸರಿಯಾಗಿ ಕುಣಿಯುತ್ತ ಕೋಲನ್ನು ನೆಟ್ಟಗೆ ನಿಲ್ಲಿಸುವುದು ಆಶ್ಚರ್ಯಕರ.

Nandikolu Kunitha

ನಾವೂ ಇನ್ ಸ್ಟಾಗ್ರಾಮ್ ನಲ್ಲೂ ಇದ್ದೀವಿ! ನಮ್ಮ ಗ್ರೂಪ್ ಜಾಯಿನ್ ಆಗಿ.

ನೀವು ಪ್ರವಾಸಕ್ಕೆ ಹೋಗುವ ತಾಣದ ಮಾಹಿತಿ, ಕನ್ನಡ.ಟ್ರಾವೆಲ್ ( ​​Kannada.Travel ) ಜಾಲತಾಣದಲ್ಲಿ ಪ್ರಕಟವಾಗುವ ಬರಹಗಳ ವಿವರ, ಅಪರೂಪದ ಟ್ರಾವೆಲರ್ ಗಳ ಪರಿಚಯ, ಪ್ರವಾಸಿ ತಾಣಗಳ ಕುತೂಹಲಕರ ಚಿತ್ರ ಬರಹ ಎಲ್ಲವೂ ಇಲ್ಲಿ ನಿಮಗೆ ಸಿಗುತ್ತದೆ. ಬನ್ನಿ ಜೊತೆಯಾಗಿ.

Related Articles

Leave a Reply

Your email address will not be published. Required fields are marked *

Back to top button