ಮ್ಯಾಜಿಕ್ ತಾಣಗಳುವಿಂಗಡಿಸದ

ವಿಶ್ವ ಪಾರಂಪರಿಕ ತಾಣ ಹಂಪಿಗೆ ಒಲಿದ ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ ಪ್ರಶಸ್ತಿ

ಕರ್ನಾಟಕ ರಾಜ್ಯದ ಹೆಮ್ಮೆಯ ವಿಶ್ವ ಪಾರಂಪರಿಕ ತಾಣ (World Heritage Site) ಹಂಪಿಯು ಕೇಂದ್ರ ಸರ್ಕಾರದ ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ ಪ್ರಶಸ್ತಿಗೆ ಆಯ್ಕೆಯಾಗಿದೆ. ಸೆ. 27 ವಿಶ್ವ ಪ್ರವಾಸೋದ್ಯಮ ದಿನದಂದು ಈ ಪ್ರವಾಸೋದ್ಯಮ ಸಚಿವಾಲಯವು (Ministry of Tourism)  ಈ ಘೋಷಣೆ ಮಾಡಲಾಯಿತು.

ಉಜ್ವಲಾ.ವಿ.ಯು

ಪ್ರಶಸ್ತಿಗೆ 31 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸೇರಿ 729 ಅರ್ಜಿಗಳು ಸಲ್ಲಿಕೆಯಾಗಿದ್ದವು. ರಾಜ್ಯದಿಂದ ಆಯ್ಕೆಯಾಗಿರುವ ಏಕೈಕ ಗ್ರಾಮ ಪಂಚಾಯಿತಿ ಹಂಪಿ ಎಂದು ರಾಜ್ಯ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕಿ ಅನಿತಾ ಭಾಸ್ಕರ್ ಈ ಮಾಹಿತಿ ನೀಡಿದ್ದಾರೆ.

World Heritage Site “Hampi”

ಹಂಪಿಯು ಈಗಾಗಲೇ ವಿಶ್ವ ಪಾರಂಪರಿಕ ತಾಣವಾಗಿದ್ದು, ವಿಜಯನಗರ ಕಾಲದ ಕಲಾ ವೈಭವಕ್ಕೆ ಹೆಸರುವಾಸಿಯಾಗಿದೆ. ಪ್ರತಿವರ್ಷ ಈ ಹಂಪಿಯ ವೈಭೋಗವನ್ನು ಕಣ್ತುಂಬಿಕೊಳ್ಳಲು ದೇಶ-ವಿದೇಶಗಳಿಂದ ಲಕ್ಷಾಂತರ ಜನ ಇಲ್ಲಿಗೆ ಭೇಟಿ ನೀಡುತ್ತಾರೆ.

ಬಾಳೆ ನಾರಿನಿಂದ ಮಾಡುವ ಕರಕುಶಲ ವಸ್ತುಗಳು, ಮಳಿಗೆಗಳು ಹಾಗೂ ಹೋಂಸ್ಟೇಗಳಲ್ಲಿ ಪ್ರವಾಸಿ ಸೌಲಭ್ಯಕ್ಕೆ ಇರುವ ಪೂರಕ ವಾತಾವರಣ, ಪ್ರವಾಸೋದ್ಯಮದಲ್ಲಿ ಸ್ಥಳೀಯರು ತೊಡಗಿಸಿಕೊಂಡಿರುವ ರೀತಿಯನ್ನು ಗಮನಿಸಿ ಹಂಪಿಗೆ ಈ ಪ್ರಶಸ್ತಿ ಒಲಿದು ಬಂದಿದೆ.

ಪ್ರವಾಸೋದ್ಯಮ ಸ್ಪರ್ಧೆಯಲ್ಲಿ ಒಂಭತ್ತು ಉತ್ತಮ ಸ್ಥಳಗಳ ಪೈಕಿ ಹಂಪಿಯು ವಿವಿಧ ಹಂತದ ಪರೀಕ್ಷೆಗಳನ್ನು ಎದುರಿಸಿ, “ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ-2023” (Best Tourism Village – 2023) ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. “ಇದೊಂದು ಹೆಮ್ಮೆಯ ಕ್ಷಣ” ಎಂದು ಕರ್ನಾಟಕ ಪ್ರವಾಸೋದ್ಯಮ ಮತ್ತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಎಚ್‌.ಕೆ. ಪಾಟೀಲ್ ಅವರು ಹೇಳಿದ್ದಾರೆ.

ನವದೆಹಲಿಯ ಭಾರತ್ ಮಂಟಪದಲ್ಲಿ ಪ್ರವಾಸೋದ್ಯಮ ರಾಜ್ಯ ಖಾತೆ ಸಚಿವ ಅಜಯ್ ಭಟ್ ಹಂಪಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಜನಿ ಷಣ್ಮುಖ ಗೌಡ ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಈ ಪ್ರಶಸ್ತಿಯು ಹಂಪಿಯ ಗ್ರಾಮೀಣ ಮೂಲಸೌಕರ್ಯ ಮತ್ತು ಸ್ಥಳೀಯ ಸಂಸ್ಕೃತಿಯನ್ನು ಇನ್ನಷ್ಟು ಉತ್ತೇಜಿಸಲು ರಾಜ್ಯ ಸರ್ಕಾರಕ್ಕೆ ಹೆಚ್ಚಿನ ಅನುದಾನ ಪಡೆಯಲು ಕೂಡ ಸಹಾಯಕವಾಗಿದೆ.

ನಾವೂ ಇನ್ ಸ್ಟಾಗ್ರಾಮ್ ನಲ್ಲೂ ಇದ್ದೀವಿ! ಕನ್ನಡ.ಟೆಲಿಗ್ರಾಮ್ ಗ್ರೂಪ್ ಜಾಯಿನ್ ಆಗಿ.

ನೀವು ಪ್ರವಾಸ ಹೋಗುವ ತಾಣದ ಮಾಹಿತಿ, ಕನ್ನಡ.ಟ್ರಾವೆಲ್ (Kannada.Travel) ಜಾಲತಾಣದಲ್ಲಿ ಪ್ರಕಟವಾಗುವ ಬರಹಗಳ ವಿವರ, ಅಪರೂಪದ ಟ್ರಾವೆಲರ್ ಗಳ ಪರಿಚಯ, ಪ್ರವಾಸಿ ತಾಣಗಳ ಕುತೂಹಲಕರ ಚಿತ್ರ ಬರಹ ಎಲ್ಲವೂ ಇಲ್ಲಿ ನಿಮಗೆ ಸಿಗುತ್ತದೆ. ಬನ್ನಿ ಜೊತೆಯಾಗಿ.

Related Articles

Leave a Reply

Your email address will not be published. Required fields are marked *

Back to top button